ಸುವರ್ಣ ಗಂಗೋತ್ರಿಯಲ್ಲಿ ಬೀಳ್ಕೊಡುಗೆ ಸಮಾರಂಭ
ಚಾಮರಾಜನಗರ

ಸುವರ್ಣ ಗಂಗೋತ್ರಿಯಲ್ಲಿ ಬೀಳ್ಕೊಡುಗೆ ಸಮಾರಂಭ

April 30, 2019

ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಪ್ರೊ.ಶಿವಬಸವಯ್ಯ
ಚಾಮರಾಜನಗರ: ಶಿಕ್ಷಣ ದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಗುಣಮಟ್ಟ ಶಿಕ್ಷಣ ಪಡೆದು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇ ಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಶಿವಬಸಯ್ಯ ಕರೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತ ಕೋತ್ತರ ಕೇಂದ್ರದ ಸುವರ್ಣ ಗಂಗೋತ್ರಿ ಸಭಾಂಗಣದಲ್ಲಿ ಸೋಮವಾರ ಪ್ರಥಮ ಎಂ.ಕಾಂ ವಿದ್ಯಾರ್ಥಿಗಳಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸ ಲಾಗಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾ ಟಿಸಿ ಮಾತನಾಡಿದ ಅವರು, ಹಣ ಆಸ್ತಿ ಕಳ್ಳತನವಾಗಬಹುದು. ಆದರೆ ವಿದ್ಯೆಯನ್ನು ಯಾರು ಕಳ್ಳತನ ಮಾಡಲು ಸಾಧ್ಯವಿಲ್ಲ. ದೇಶ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣ ದಿಂದ ಮಾತ್ರ ಸಾಧ್ಯ ಎಂದ ಅವರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತಮಟ್ಟದ ಅಧಿಕಾರಿಗಳಾಗಿ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತನ್ನಿ ಎಂದರು.

ಉಪನ್ಯಾಸಕ ಮಹೇಶ್ ಮಾತನಾಡಿ, ನಮ್ಮ ಕಾಲೇಜಿನ ಎಂಕಾಂ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ತಮ್ಮಲ್ಲಿರುವ ಪ್ರತಿಭೆ ಮೂಲಕ ಕ್ರೀಡೆ, ಸಾಂಸ್ಕøತಿಕ ಮತ್ತು ಎನ್‍ಎಸ್‍ಎಸ್ ಕಾರ್ಯಕ್ರಮಗಳಲ್ಲಿ ಸಕ್ರಿಯ ವಾಗಿ ಭಾಗವಹಿಸಿ ಹಲವಾರು ಬಹುಮಾನ ಗಳನ್ನು ಪಡೆದಿದ್ದಾರೆ. ಯೋಗದಲ್ಲಿ ದಿವ್ಯಾ ಎಂಬ ವಿದ್ಯಾರ್ಥಿನಿ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಪನ್ಯಾಸÀಕಿ ಶ್ವೇತಾ ಮಾತನಾಡಿ, ಎಂ.ಕಾಂ ವಿದ್ಯಾಭ್ಯಾಸ ಮಾಡಿದ ಬಹು ತೇಕ ಮಂದಿ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದ್ವಿತೀಯ ಎಂ.ಕಾಂನಲ್ಲಿ ಬಹುತೇಕ ಮಂದಿ ವಿದ್ಯಾರ್ಥಿನಿಯರಿದ್ದು, ವಿದ್ಯಾಭ್ಯಾಸ ಮುಗಿದ ನಂತರ ಪೋಷಕರು ಮದುವೆ ಮಾಡಿ ಕಳುಹಿಸುತ್ತಾರೆ. ಆದ್ದರಿಂದ ಒಳ್ಳೆ ಅಧಿಕಾರಿಗಳಾಗಿ ಹೊರಹೊಮ್ಮಿ ನೀವು ಸಂಪಾದಿಸಿದ ಹಣದಲ್ಲಿಯೇ ಮದುವೆ ಯಾಗಿ ಎಂದು ಸಲಹೆ ನೀಡಿದರು.

ಉಪನ್ಯಾಸಕ ಚೇತನ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಗುರು ಹಿರಿಯರಿಗೆ ಗೌರವ ಸಲ್ಲಿಸುವ ಪ್ರವೃತ್ತಿ ಬೆಳೆಸಿಕೊಂಡಾಗ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ಸುವರ್ಣ ಗಂಗೋತ್ರಿ ಮಿಸ್ 2019 ಪ್ರಶಸ್ತಿ ವಿಜೇತೆ ತೇಜಶ್ವಿನಿಗೆ ಬಹು ಮಾನ ವಿತರಿಸಿ ಮಾತನಾಡಿದ ಉಪನ್ಯಾಸಕಿ ಶಾಲಿನಿ, ಪ್ರಸ್ತುತ ಮಹಿಳೆಯರು ಪುರುಷ ರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಯ ಪ್ರಜ್ಞೆ, ಶಿಸ್ತು, ಸೇವಾ ಮನೋಭಾವನೆ ಬೆಳೆಸಿಕೊಳ್ಳ ಬೇಕೆಂದು ತಿಳಿಸಿದರು. ಈ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು. ಅಲ್ಲದೇ ವಿದ್ಯಾರ್ಥಿ ಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

Translate »