ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ
ಮಂಡ್ಯ

ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ

June 26, 2018

ಪಾಂಡವಪುರ: ಚುನಾವಣೆಗೂ ಮುನ್ನಾ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಭರ ವಸೆಯಂತೆ ರೈತರ ಸಾಲಮನ್ನಾ ಮಾಡುವ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಸಣ್ಣ ನೀರಾ ವರಿ ಸಚಿವ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತ ಪಡಿಸಿದರು.

ಪಟ್ಟಣದ ಕೃಷ್ಣಾ ನಗರದ ತಮ್ಮ ನಿವಾಸದ ಎದುರು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ನಂತರ ಮಾತನಾಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿದ್ದು, ರೈತರಿಗೆ ಅನುಕೂಲವಾಗುವ ಹೊಸ ಯೋಜನೆಗಳನ್ನು ಬಜೆಟ್‍ನಲ್ಲಿ ಮಂಡಿಸಲಿದ್ದಾರೆ. ಅಲ್ಲದೇ ಚುನಾವಣೆಗೂ ಮುನ್ನ ಜೆಡಿಎಸ್ ಪ್ರಣಾಳಿಕೆಯಲ್ಲಿ ಘೋಷಿ ಸಿದ್ದಂತೆ ರಾಜ್ಯದ ರೈತರ ಸಾಲಮನ್ನಾ ಮಾಡುವ ಬಗ್ಗೆಯೂ ಅವರು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದು ಜು.5ರಂದು ರಾಜ್ಯ ಬಜೆಟ್‍ನಲ್ಲಿ ಸಾಲಮನ್ನಾದ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸು ವಂತೆ ಪ್ರಧಾನಮಂತ್ರಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೂಡಿ ಮನವಿ ಮಾಡಿದ್ದೇವೆ. ಪ್ರಧಾನಿ ರಾಜ್ಯದ ಹಿತಕಾಯಲಿ ದ್ದಾರೆ ಎನ್ನುವ ನಂಬಿಕೆ ಇದೆ ಎಂದರು.

ಇದೇ ವೇಳೆ ಮೇಲುಕೋಟೆ ಕ್ಷೇತ್ರದಿಂದ ಹೆಚ್ಚು ಅಂತರದಿಂದ ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸಿ ಇಂದು ರಾಜ್ಯದ ಕ್ಯಾಬಿನೆಟ್ ದರ್ಜೆಯ ಸಚಿವನಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಕ್ಷೇತ್ರದ ಜನತೆಗೆ ಪುಟ್ಟರಾಜು ಕೃತಜ್ಞತೆ ಸಲ್ಲಿಸಿದರು.

ನನ್ನ ರಾಜಕೀಯ ಜೀವನ ಕ್ಷೇತ್ರದಲ್ಲಿ ಒಂದು ಇತಿಹಾಸ ಸೃಷ್ಠಿಸಿದೆ. ಪಾಂಡವ ಪುರ ಕ್ಷೇತ್ರದ ಕೊನೆ ಶಾಸಕ, ಮೇಲು ಕೋಟೆ ಕ್ಷೇತ್ರದ ಮೊದಲ ಶಾಸಕನಾಗಿ ಕೆಲಸ. ಬಳಿಕ ಕ್ಷೇತ್ರದಿಂದ ಜಿಲ್ಲೆಯ ಮೊದಲ ಸಂಸದನಾಗಿ ಕೆಲಸ ಮಾಡಿದೆ. ಇದೀಗ ಕ್ಷೇತ್ರದ ಮೊದಲ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಇದಕ್ಕೆ ನನ್ನ ಕ್ಷೇತ್ರದ ಜನತೆಯ ಆಶೀ ರ್ವಾದವೇ ಕಾರಣ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ. ನಾನು ರಾಜ್ಯ ಸಚಿವ ನಾಗಿದ್ದರೂ, ವಾರದಲ್ಲಿ 5 ದಿನ ರಾಜ್ಯ ಪ್ರವಾಸ ಮಾಡಿದರೆ, ಉಳಿದೆರಡು ದಿನ ಕ್ಷೇತ್ರ ದಲ್ಲಿ ಪ್ರವಾಸ ಮಾಡಿ ಸಂಪೂರ್ಣ ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ ತಾಲೂಕು ಜೆಡಿಎಸ್ ಅಧ್ಯಕ್ಷ ಧರ್ಮರಾಜು, ಜಿಪಂ ಸದಸ್ಯರಾದ ತಿಮ್ಮೇಗೌಡ, ಸಿ.ಅಶೋಕ್, ಅನುಸೂಯ, ಶಾಂತಲ, ತಾಪಂ ಅಧ್ಯಕ್ಷೆ ಪೂರ್ಣಿಮಾ, ಟಿಎಪಿಸಿಎಂಎಸ್ ಅಧ್ಯಕ್ಷ ರಾಜಪ್ಪ, ಎಪಿಎಂಸಿ ಅಧ್ಯಕ್ಷ ಸುರೇಂದ್ರ, ತಾಪಂ ಸದಸ್ಯರು, ಪುರಸಭೆ ಸದಸ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.

ಅದ್ಧೂರಿ ಸ್ವಾಗತ: ಸಚಿವರಾದ ನಂತರ ಮೊದಲ ಬಾರಿಗೆ ಪಾಂಡವಪುರ ಪಟ್ಟಣಕ್ಕೆ ಆಗಮಿಸಿದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಕ್ಷೇತ್ರದ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿದರು.

ತಾಲೂಕಿನ ಗಡಿಭಾಗ ಪಿಎಸ್‍ಎಸ್‍ಕೆ ಕಾರ್ಖಾನೆ ಬಳಿ ಬೆಳಿಗ್ಗೆ 10.30ಕ್ಕೆ ಆಗಮಿಸಿದ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರಿಗೆ ನೂರಾರು ಜೆಡಿಎಸ್ ಕಾರ್ಯಕರ್ತರು ಹೂಗುಚ್ಚ ಕೊಟ್ಟು ಸ್ವಾಗತಿಸಿದರು. ಇದೇ ವೇಳೆ ಪಿಎಸ್‍ಎಸ್‍ಕೆ ಆಡಳಿತ ಮಂಡಳಿ ಅಧ್ಯಕ್ಷರು, ನಿರ್ದೇಶಕರು ಸಹ ಸಚಿವರನ್ನು ಸ್ವಾಗತಿಸಿದರು. ನಂತರ ಪಾಂಡವಪುರ ಪಟ್ಟಣಕ್ಕೆ ಆಗಮಿಸಿದ ಸಿ.ಎಸ್.ಪುಟ್ಟರಾಜು ಅವರು ಬನ್ನಾರಿಯಮ್ಮನ್ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದರು. ಬಳಿಕ ಪಟ್ಟಣದ ಪಿಇಎಸ್ ಬಾಲಕಿ ಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದರು. ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಎಂ.ಸಿ.ಯಶವಂತ್ ಕುಮಾರ್ ಹಾಗೂ ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಸನ್ಮಾನಿಸಿದರು.

Translate »