ರೈತ ಆತ್ಮಹತ್ಯೆ
ಮಂಡ್ಯ

ರೈತ ಆತ್ಮಹತ್ಯೆ

December 10, 2019

ಪಾಂಡವಪುರ, ಡಿ.9- ಸಾಲಬಾಧೆ ತಾಳ ಲಾರದೇ ರೈತರೊಬ್ಬರು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗಾಣದ ಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸ್ವಾಮೀ ಗೌಡ(45) ಆತ್ಮಹತ್ಯೆ ಮಾಡಿಕೊಂಡವರು. ತಂದೆ ಮಾಸ್ತೀಗೌಡÀರ ಹೆಸರಲ್ಲಿದ್ದ 20 ಗುಂಟೆ ಹಾಗೂ ತಾತ ಜವರೇಗೌಡರ ಹೆಸರಿನಲ್ಲಿದ್ದ 1 ಎಕರೆ ಜಮೀನಿನಲ್ಲಿ ಸ್ವಾಮೀಗೌಡರು ಬೇಸಾಯ ಮಾಡುತ್ತಿದ್ದರು. ಇದಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸೇರಿದಂತೆ ವಿವಿಧ ಖಾಸಗಿ ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ 7 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಮನ ನೊಂದಿದ್ದ ಅವರು ಸೋಮವಾರ ಸಂಜೆ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »