ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
ಹಾಸನ

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

August 31, 2018

ಹೊಳೆನರಸೀಪುರ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಾಲೂಕಿನ ಹಿರೇಬೆಳಗುಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಾಸಿ ಬಸವಲಿಂಗಪ್ಪ(41) ಮೃತ ರೈತ. ಇವರು ತಮ್ಮ 4 ಎಕರೆ ಜಮೀನಿನಲ್ಲಿ ಜೋಳ, ಶುಂಠಿ ಬೇಸಾಯ ಮಾಡಿದ್ದರು. ಇದಕ್ಕಾಗಿ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಂದ ಒಟ್ಟು 1.90 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ಬೆಳೆ ನಷ್ಟದ ಪರಿಣಾಮ ಬೇಸತ್ತ ಬಸವಲಿಂಗಪ್ಪ ವಿಷ ಸೇವಿಸಿ ಅಸ್ವಸ್ಥ ಗೊಂಡಿದ್ದರು. ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಹೊಳೆನರಸೀಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

Translate »