ಸಾಲಬಾಧೆಯಿಂದ ರೈತ ಆತ್ಮಹತ್ಯೆ
ಮಂಡ್ಯ

ಸಾಲಬಾಧೆಯಿಂದ ರೈತ ಆತ್ಮಹತ್ಯೆ

November 8, 2018

ಕೆ.ಆರ್.ಪೇಟೆ: ಸಾಲದ ಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಯಾಲಕ್ಕೀಗೌಡ ಅವರ ಮಗ ಜವರೇಗೌಡ(55) ಆತ್ಮಹತ್ಯೆ ಮಾಡಿಕೊಂಡ ರೈತ.
ಘಟನೆ ವಿವರ: ರೈತ ಜವರೇಗೌಡ ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ವಿವಿಧ ಬ್ಯಾಂಕ್‍ಗಳಲ್ಲಿ ಸುಮಾರು 2 ಲಕ್ಷ ರೂ. ಹಾಗೂ 2 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು.

ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಬಾಳೆ ತೆಂಗಿನ ಬೆಳೆ ಬೆಳೆದಿದ್ದರು. ಮಳೆ ಇಲ್ಲದೆ ಬೆಳೆ ಕೈಗೂಡದ ಕಾರಣ ಸಾಲ ತೀರಿಸಲಾಗದೆ ತಮ್ಮ ಜಮೀನಿನ ಬಳಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ನಂಜಾಮಣಿ ಅವರು ಗ್ರಾಮಾಂತರೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮಾಜಿ ಶಾಸಕ ಬಿ.ಪ್ರಕಾಶ್ ಸೇರಿದಂತೆ ಇತರರು ಮೃತ ರೈತನ ಅಂತಿಮ ದರ್ಶನ ಪಡೆದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆನಂದಗೌಡ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Translate »