ಸಾಲಬಾಧೆ: ರೈತ ಆತ್ಮಹತ್ಯೆ
ಹಾಸನ

ಸಾಲಬಾಧೆ: ರೈತ ಆತ್ಮಹತ್ಯೆ

June 5, 2018

ಹಾಸನ: ಸಾಲಬಾಧೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಜಿ.ಅಂಕನಹಳ್ಳಿಯಲ್ಲಿ ಗ್ರಾಮದ ಕುಮಾರ್(40) ಮೃತ ರೈತ. ಸಾಲಬಾಧೆಯಿಂದ ಬೇಸತ್ತು ಶನಿವಾರ ಸಂಜೆ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕುಮಾರ್ ಅಸಿನೀಗಿದ್ದಾರೆ. ಬ್ಯಾಂಕ್ ಸೇರಿದಂತೆ ಇತರೆಡೆಯಿಂದ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

Translate »