ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 34 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಘೋಷಿಸಿದ್ದರೂ, ರೈತರ ಮುಖದಲ್ಲಿ ಮಂದಹಾಸ ಮೂಡಿಸಿಲ್ಲ. ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಜುಲೈ 9 ರಂದು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕುಮಾರಸ್ವಾಮಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾಗ ರಾಜ್ಯದ ರೈತರ ಸುಮಾರು 1.2 ಲಕ್ಷ ಕೋಟಿ ರೂ. ಮೊತ್ತದ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ರಾಜ್ಯದ ರೈತ ಸಮೂಹ ನಿರೀಕ್ಷಿಸಿತ್ತು. ಆದರೆ ಕೇವಲ ಬೆಳೆ ಸುಸ್ತಿ ಸಾಲ 34 ಸಾವಿರ ಕೋಟಿ ಮನ್ನಾ ಮಾಡಿರುವುದು ರೈತರ ನಿರೀಕ್ಷೆ ಹುಸಿಯಾಗುವಂತೆ ಮಾಡಿದೆ. ಅವರಲ್ಲಿ ನಿರಾಸೆ ಮೂಡಿಸಿದೆ. ಅಸಮಾಧಾನಗೊಂಡಿ ರುವ ರೈತರ ಕೋಪ ಶಮನ ಮಾಡಲು ಮುಖ್ಯಮಂತ್ರಿಗಳು ಯತ್ನಿಸಿದರೂ ಕೂಡ ಬಾಕಿ ಸಾಲ ಮನ್ನಾ ಯಾರು ಮಾಡುತ್ತಾರೆ? ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡ ಬೇಕು. ಇಲ್ಲದಿದ್ದರೆ ಸಾಮೂಹಿಕವಾಗಿ ಪ್ರತಿ ಭಟನೆಗೆ ಮುಂದಾಗುತ್ತೇವೆ ಎಂದು ಕರ್ನಾ ಟಕ ರಾಜ್ಯ ರೈತರ ಸಂಘದ ಅಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್‍ನಲ್ಲಿ ಸಾಲ ಮನ್ನಾ ಘೋಷಿಸಿದ ಬಗ್ಗೆ ಚರ್ಚೆ ನಡೆಸಲು ರೈತರು ಶುಕ್ರವಾರ ಸಭೆ ಸೇರಿದ್ದರು. ರೈತರ ಎಲ್ಲಾ ರೀತಿಯ ಕೃಷಿ ಸಾಲಗಳನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಜುಲೈ 9 ರಂದು ಬೆಂಗಳೂರಿ ನಲ್ಲಿ ಮೊದಲ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದರು. ನಂತರ ಜುಲೈ 21 ರಂದು ಹಾವೇರಿಯಲ್ಲಿ ಬೃಹತ್ ರ್ಯಾಲಿ ನಡೆಸಿ ಸಂಪೂರ್ಣ ಸಾಲ ಮನ್ನಾಕ್ಕಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಸಾಲ ಮನ್ನಾಗೆ ಹಣ ಒದಗಿಸಲು ಮುಖ್ಯ ಮಂತ್ರಿಗಳು ಈಗಾಗಲೇ ಬಜೆಟ್‍ನಲ್ಲಿ ಪೆಟ್ರೋಲ್, ಡೀಸೆಲ್, ವಿದ್ಯುತ್ ಹಾಗೂ ಮದ್ಯದ ಬೆಲೆ ಹೆಚ್ಚಳ ಮಾಡಿದ್ದಾರೆ. ಸಾಲ ಮನ್ನಾದ ಪ್ರಯೋ ಜನ ಸರಿಯಾಗಿ ತಲುಪುವುದಿಲ್ಲ ಎಂಬ ಕಾರಣಕ್ಕಾಗಿ ರಾಜ್ಯದ ಕೆಲವೆಡೆ ರೈತರ ಆತ್ಮ ಹತ್ಯೆಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ರಾಜಕೀಯ ಹಿತಾಸಕ್ತಿಯನ್ನು ಬದಿಗಿಟ್ಟು ರೈತರ ಹಿತಾ ಸಕ್ತಿಯನ್ನು ಕಾಪಾಡಬೇಕು. ಸಾಲಬಾಧೆ ಯಿಂದ ರೈತರನ್ನು ಪಾರು ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.