ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!
ಮಂಡ್ಯ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!

July 17, 2018
  • ಸಚಿವ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ, ರೈತರ ಆರೋಗ್ಯ ವಿಚಾರಣೆ

ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿ ಸಿರುವ ಘಟನೆ ನಗರದಲ್ಲಿಂದು ನಡೆದಿದೆ.

ಮದ್ದೂರು ತಾಲೂಕು ಅಂಬರಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಚೌಡಪ್ಪ ಪ್ರತಿಭಟನೆ ವೇಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದ ಬೆಳೆಗಾರರು, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿ ದರು. ಈ ಸಂದರ್ಭ ಚೌಡಪ್ಪ ಸಾರ್ವ ಜನಿಕವಾಗೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.

ಈ ವೇಳೆ ಸ್ಥಳದಲ್ಲಿದ್ದ ಇತರೆ ಬೆಳೆಗಾರರು ಹಾಗೂ ಪೊಲೀಸರು ಅವರನ್ನು ತಮ್ಮ ವಾಹನದಲ್ಲೇ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ದರು. ಅಸ್ವಸ್ಥರಾಗಿರುವ ರೈತನಿಗೆ ಚಿಕಿತ್ಸೆ ಮುಂದುವರಿದಿದ್ದು, ಸದ್ಯಕ್ಕೆ ಪ್ರಾಣಾಪಾಯ ವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ಸಚಿವ ಪುಟ್ಟರಾಜು ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸಿ.ಎಸ್.ಪುಟ್ಟರಾಜು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವ ರೈತ ಚೌಡಪ್ಪನಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಮಾತನಾಡಿದ ಸಚಿವರು, ರೈತರ ಆತ್ಮಹತ್ಯೆಗೆ ಯತ್ನ ಕುರಿತು ಸಿಎಂ ಜೊತೆ ಪೋನ್ ಮೂಲಕ ಚರ್ಚೆ ಮಾಡಿ ದ್ದೇನೆ. ಮುಖ್ಯಮಂತ್ರಿಗಳು ರೇಷ್ಮೆಗೆ ಬೆಂಬಲ ಮೇಲೆ ನೀಡುವ ಭರವಸೆ ನೀಡಿದ್ದಾರೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಮುಂದಾಗಬಾರದು ಎಂದು ಸಚಿವರು ಮನವಿ ಮಾಡಿದರು.

ಈ ಸಂದರ್ಭ ಶಾಸಕರಾದ ಎನ್.ಸುರೇಶ್ ಗೌಡ, ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇ ಗೌಡ ಮತ್ತಿತರರು ಹಾಜರಿದ್ದರು.

Translate »