ಬೆಳೆಗೆ ನೀರು ಹರಿಸುವಂತೆ ರೈತರ ಅಹೋರಾತ್ರಿ ಧರಣಿ
ಮಂಡ್ಯ

ಬೆಳೆಗೆ ನೀರು ಹರಿಸುವಂತೆ ರೈತರ ಅಹೋರಾತ್ರಿ ಧರಣಿ

June 26, 2019

ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಮಂಜುಶ್ರೀ ಪತ್ರ
ಮಂಡ್ಯ, ಜೂ.25- ಕೆಆರ್‍ಎಸ್ ನಿಂದ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನಗರದ ಕಾವೇರಿ ನೀರಾವರಿ ನಿಗಮದ ಕಚೇರಿ ಮುಂಭಾಗದಲ್ಲಿ ಕಳೆದ 5 ದಿನ ಗಳಿಂದ ಕರ್ನಾಟಕ ರಾಜ್ಯ ರೈತ ಸಂಘದಿಂದ ಅಹೋ ರಾತ್ರಿ ಧರಣಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಂಜುಶ್ರೀ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‍ಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಿದ್ದು, ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳುವಂತೆ ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಮಾಹಿತಿ ನೀಡಿದ್ದಾರೆ. ಜೊತೆಗೆ, ಕಾವೇರಿ ನೀರಾವರಿ ಮೇಲುಸ್ತುವಾರಿ ಸಮಿತಿಯ ಒಪ್ಪಿಗೆ ಇಲ್ಲದೆ ನೀರನ್ನು ನಾಲೆಗೆ ಹರಿಸುವಂತಿಲ್ಲ.

ಆದರೆ, ರೈತರು ಕಳೆದ 5 ದಿನಗಳಿಂದ ಕಾವೇರಿ ಹಾಗೂ ಹೇಮಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸು ತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳೆಗಳಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಬಗ್ಗೆ ರೈತರಿಗೆ ವಾಸ್ತವ ಸ್ಥಿತಿ ತಿಳಿಸಿ ದರೂ ಅವರು ಪ್ರತಿಭಟನೆ ಕೈ ಬಿಟ್ಟಿಲ್ಲ. ಹಾಗಾಗಿ, ಸದರಿ ವಾಸ್ತವಾಂಶ ವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Translate »