ಲಾಕ್‍ಡೌನ್‍ನಿಂದ ಕಷ್ಟಕ್ಕೆ ಸಿಲುಕಿದ ರೈತರು, ಕೃಷಿ ಕೂಲಿಕಾರರಿಗೆ ನೆರವಾಗಿ ಡಿಸಿ ಮೂಲಕ ಪ್ರಧಾನಮಂತ್ರಿಗೆ ರೈತಸಂಘದ ಮನವಿ
ಮೈಸೂರು

ಲಾಕ್‍ಡೌನ್‍ನಿಂದ ಕಷ್ಟಕ್ಕೆ ಸಿಲುಕಿದ ರೈತರು, ಕೃಷಿ ಕೂಲಿಕಾರರಿಗೆ ನೆರವಾಗಿ ಡಿಸಿ ಮೂಲಕ ಪ್ರಧಾನಮಂತ್ರಿಗೆ ರೈತಸಂಘದ ಮನವಿ

May 28, 2020

ಮೈಸೂರು, ಮೇ 27(ಆರ್‍ಕೆಬಿ)- ಲಾಕ್‍ಡೌನ್‍ನಿಂದಾಗಿ ಕಷ್ಟಕ್ಕೆ ಸಿಲುಕಿರುವ ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಸುಬುದಾರರ ತಕ್ಷಣದ ಬೇಡಿಕೆಗಳನ್ನು ಈಡೇರಿ ಸುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದ ಕಾರ್ಯಕರ್ತರು ಬುಧ ವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ರೈತಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ಜಮಾವಣೆಗೊಂಡ ರೈತರು, ಬೇಡಿಕೆಗಳನ್ನು ಈಡೇರಿಸುವಂತೆ ಪ್ರಧಾನಿಗೆ ಬರೆದ ಮನವಿಪತ್ರವನ್ನು ಡಿಸಿ ಅಭಿರಾಂ ಜಿ.ಶಂಕರ್ ಅವರಿಗೆ ಹಸ್ತಾಂತರಿಸಿದರು. ಲಾಕ್‍ಡೌನ್‍ನಿಂದಾಗಿ 2 ತಿಂಗಳಿಂದ ಕೃಷಿರಂಗ ತೀವ್ರ ಬಿಕ್ಕಟ್ಟು ಎದುರಿಸುವಂತಾಗಿದೆ. ಕೃಷಿ ಉತ್ಪನ್ನಗಳನ್ನು ತೀರಾ ಕಡಿಮೆ ದರಕ್ಕೆ ಮಾರಾಟ ಮಾಡಿ ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ತರಕಾರಿ, ಹಣ್ಣು, ಆಹಾರ ಧಾನ್ಯ ಬೆಳೆಯುವ ರೈತರಷ್ಟೇ ಅಲ್ಲ, ಕೋಳಿ, ಕುರಿ, ಪಶು ಸಂಗೋಪನೆಯಲ್ಲಿ ತೊಡಗಿರು ವವÀರೂ ನಷ್ಟ ಅನುಭವಿಸಿದ್ದಾರೆ. ಸರ್ಕಾರ ರೈತರು, ಕೃಷಿ ಕೂಲಿಕಾರರು, ಗ್ರಾಮೀಣ ಕಸುಬುದಾರರ ನೆರವಿಗೆ ತಕ್ಷನ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಪಿ.ಮರಂಕಯ್ಯ ಇನ್ನಿತರರಿದ್ದರು.

Translate »