ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಆಗ್ರಹಿಸಿ ರೈತ ಸಂಘ ಧರಣಿ
ಮೈಸೂರು

ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಆಗ್ರಹಿಸಿ ರೈತ ಸಂಘ ಧರಣಿ

August 20, 2019

ಮೈಸೂರು,ಆ.19(ಪಿಎಂ)-ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಹಾಗೂ ಸಂತ್ರಸ್ತ ರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾ ರರು, ರಾಜ್ಯದಲ್ಲಿ ಇತ್ತೀಚೆಗೆ ಆದ ನೆರೆ ಹಾವಳಿಯಿಂದ ಸಾವು-ನೋವುಗಳು ಸಂಭವಿಸಿದ್ದು, ಆಸ್ತಿ-ಪಾಸ್ತಿ ಕಳೆದು ಕೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಬೆಳೆಗೆ ಹಾನಿಯಾದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ತುತ್ತಾಗಿ ದ್ದಾರೆ. ಇಷ್ಟೆಲ್ಲಾ ಸಂಕಷ್ಟದಲ್ಲಿ ರಾಜ್ಯ ಮುಳುಗಿದ್ದರೂ ಕೇಂದ್ರ ಸರ್ಕಾರ ಪರಿಹಾರ ನೀಡದೇ ಮಲತಾಯಿ ಧೋರಣೆ ಅನುಸರಿ ಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ತಾತ್ಕಾಲಿಕ ನೆರವು ನೀಡಿದ್ದು, ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ. ಕಳೆದ ವರ್ಷ ನೆರೆ ಹಾವಳಿಗೆ ಸಿಲುಕಿದವರ ಬದುಕು ಇಂದಿಗೂ ಸುಧಾರಣೆ ಆಗಿಲ್ಲ. ಇದೀಗ ಮತ್ತೆ ನೆರೆ ಹಾವಳಿಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳನ್ನು ಸಮೀಕ್ಷೆ ನಡೆಸಿ, ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯದ ನೆರೆ ಹಾವಳಿ ಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿ ಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಜಿಲ್ಲೆಗಳ ನದಿ ಹಾಗೂ ಜಲಾಶಯ ವ್ಯಾಪ್ತಿಯಲ್ಲಿ ಬೆಳೆ ಮತ್ತು ಭೂ ನಷ್ಟವನ್ನು ಭರಿಸಬೇಕು. ಪ್ರಾಣ ಹಾನಿಯಾಗಿರುವ ರೈತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿ, ಸದರಿ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಪ್ರಧಾನಿಗಳು ರಾಜ್ಯಕ್ಕಾಗಿರುವ ನಷ್ಟ ಭರಿಸಲು ಹಾಗೂ ಪರಿಹಾರ ಕ್ರಮಕ್ಕಾಗಿ ಅಗತ್ಯವಿರುವ ಅನು ದಾನ ಬಿಡುಗಡೆಗೆ ಶೀಘ್ರ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಆ.15ರಿಂದ 18ರವರೆಗೆ ರೈತ ಸಂಘದ ಪದಾಧಿಕಾರಿಗಳ ತಂಡ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಪ್ರವಾಸ ಕೈಗೊಂಡು ನೆರೆ ಸಂತ್ರಸ್ತರ ದುಃಖ ದುಮ್ಮಾ ನಗಳನ್ನು ಕಣ್ಣಾರ ಕಂಡಿದೆ. ನಿಜಕ್ಕೂ ನೆರೆ ಸಂತ್ರಸ್ತರ ಸಂಕಷ್ಟ ನೋಡಲಾಗದು. ಹಳ್ಳಿಗಾಡಿನ ಜನಜೀವನ ಬೀದಿ ಪಾಲಾಗಿದೆ. ಆಸ್ತಿ-ಪಾಸ್ತಿಗೆ ಹಾನಿ ಯುಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಇಂತಹ ಸಂಕ ಷ್ಟಕ್ಕೆ ರಾಜ್ಯ ತುತ್ತಾಗಿದ್ದರೂ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗ ಣಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಖುದ್ದು ಭೇಟಿ ನೀಡಬೇಕಿತ್ತು. ನೆಪ ಮಾತ್ರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದರು. ಅದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋಗಿದ್ದಾರೆ. ಆದರೆ ಪರಿ ಹಾರಕ್ಕೆ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ. ಹೀಗೆ ರಾಜ್ಯಕ್ಕೆ ಅನ್ಯಾಯವಾಗು ತ್ತಿದ್ದರೂ ಇಲ್ಲಿನ 25 ಬಿಜೆಪಿ ಸಂಸದರು ಕೇಂದ್ರದ ಮುಂದೆ ತಮ್ಮ ಹಕ್ಕು ಮಂಡಿ ಸಲು ಮುಂದಾಗಿಲ್ಲ ಎಂದು ಅಸಮಾ ಧಾನ ವ್ಯಕ್ತಪಡಿಸಿದರು.

ಆ.27ರಂದು ಸಭೆ: ರಾಜ್ಯದ ಜನತೆ ಸಂತ್ರಸ್ತರ ನೆರವಿಗೆ ಉದಾರವಾಗಿ ಕೊಡುಗೆ ನೀಡುತ್ತಿದ್ದಾರೆ. ಆದರೆ ಇದನ್ನು ಸೂಕ್ತ ರೀತಿಯಲ್ಲಿ ನೊಂದವರಿಗೆ ತಲುಪಿಸಲು ರಾಜ್ಯ ಸರ್ಕಾರ ಸಮರ್ಪಕ ಕ್ರಮ ಕೈಗೊಳ್ಳ ಬೇಕು. ರಾಜ್ಯದ ನೆರೆ ಹಾವಳಿ ವಿಚಾರ ದಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಬೃಹತ್ ಹೋರಾಟ ನಡೆಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಆ.27ರಂದು ಜಮಖಂಡಿ ಯಲ್ಲಿ ಸಭೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಸಭೆಯಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಾತ್ರವಲ್ಲದೆ, ಅನೇಕ ಸಂಘ-ಸಂಸ್ಥೆಗಳು ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸ ಕೋಟೆ ಬಸವರಾಜು, ಉಪಾಧ್ಯಕ್ಷ ಗುರು ಲಿಂಗೇಗೌಡ, ಪದಾಧಿಕಾರಿಗಳಾದ ಬೆಂಕಿ ಪುರ ಚಿಕ್ಕಣ್ಣ, ಪಿ.ಮರಂಕಯ್ಯ, ಪ್ರಭಾಕರ್, ಶಿರಮಳ್ಳಿ ಸಿದ್ದಪ್ಪ, ಹೆಜ್ಜಿಗೆ ಪ್ರಕಾಶ್ ಮತ್ತಿ ತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »