ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಚಾಮರಾಜನಗರ

ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

July 7, 2018

ಚಾಮರಾಜನಗರ:  2018 ಜುಲೈ 1ರವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ಇತರ ಹಕ್ಕೋತ್ತಾಯಗಳನ್ನು ಈಡೇರಿಸು ವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು.

ನಗರ-ಸಂತೇಮರಹಳ್ಳಿಯ ಜಾಲಹಳ್ಳಿ ಹುಂಡಿ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-209 ನಲ್ಲಿ ರೈತರು ರಸ್ತೆ ತಡೆ ನಡೆಸಿದರು. ತಮ್ಮ ನ್ಯಾಯ ಯುತವಾದ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನಾನು ಮುಖ್ಯಮಂತ್ರಿ ಯಾದ 24 ಗಂಟೆಯೊಳಗೆ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡುತ್ತೇನೆ ಎಂದು ವಚನ ನೀಡಿದ್ದರು. ಈಗ ಅವರು ಮಾತು ಬದಲಿಸಿ ಎರಡು ಲಕ್ಷ ರೂ.ಗಳ ಸುಸ್ತಿ ಸಾಲವನ್ನು ಮಾತ್ರ ಮನ್ನಾ ಮಾಡು ವುದಾಗಿ ಘೋಷಿಸಿದ್ದಾರೆ. ಈ ಮೂಲಕ ಹೆಚ್.ಡಿ.ಕುಮಾರಸ್ವಾಮಿ ವಚನ ಭ್ರಷ್ಟರಾಗಿದಾರೆ ಎಂದು ಆರೋಪಿಸಿದರು.

2018 ಜುಲೈ 1ರವರೆಗಿನ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಈ ಅವಧಿವರೆಗೆ ಸಾಲ ಪಾವತಿಸಿರುವ ರೈತರ ಹಣದಲ್ಲಿ ಅದರ ಅರ್ಧ ಹಣವನ್ನು ಸರ್ಕಾರ ರೈತರ ಖಾತೆಗೆ ಜಮಾ ಮಾಡಬೇಕು. ರೈತರು ಇನ್ನು ಮುಂದೆ ಸಾಲಗಾರರಾಗದಂತೆ ತಡೆಯಲು ವೈಜ್ಞಾನಿಕ ವಾದ ಮಾರುಕಟ್ಟೆ, ವಿದ್ಯುತ್, ಬೆಲೆ ನೀಡಿ ಹಾಗೂ ಸರಿಯಾದ ಕಾಲಕ್ಕೆ ನೀರು ಬಿಡುವುದು ಇತ್ಯಾದಿ. ರೈತ ಪರವಾದ ಕಾನೂನು ರೂಪಿಸುವಂತೆ ಆಗ್ರಹಿಸಿದರು.

ರೈತರು ಸಾಲದಿಂದ ವಿಮುಕ್ತರಾಗಲು ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಹೆಚ್ಚು ಒತ್ತು ಕೊಟ್ಟು, ನಾಟಿ ಬೀಜ ಮತ್ತು ನಾಟಿ ಹಸುಗಳ ಸಂರಕ್ಷಣೆಗೆ ಒತ್ತು ನೀಡ ಬೇಕು. ಪ್ರತಿಯೊಂದು ಗ್ರಾಪಂ ವ್ಯಾಪ್ತಿ ಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಿ ರೈತರಿಗೆ ಮೊದಲ ಆದ್ಯತೆ ನೀಡ ಬೇಕು. ಕೇಂದ್ರ ಸರ್ಕಾರ ಈಗಾಗಲೇ 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿ ಸಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೊಳಿಸಬೇಕು ಎಂದು ಪ್ರತಿಭಟ ನಾಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಈ ಹಕ್ಕೋತ್ತಾಯ ಗಳನ್ನು ತಕ್ಷಣದಿಂದಲೇ ಜಾರಿಗೊಳಿಸ ಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಅಸಹ ಕಾರ ಚಳುವಳಿಯನ್ನು ಪ್ರಾರಂಭಿಸಬೇಕಾಗು ತ್ತದೆ ಎಂದು ಎಚ್ಚರಿಸಿದರು.
ಸಾಲದ ಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದೇಮಹಳ್ಳಿ ಗ್ರಾಮದ ರೈತ ಚಿಕ್ಕಸ್ವಾಮಿ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೂರು ಪ್ರಕಾಶ್, ಕಾರ್ಯಾಧ್ಯಕ್ಷ ಮಾಡ್ರಳ್ಳಿ ಮಹದೇವಪ್ಪ, ಖಜಾಂಚಿ ಅಂಬಳೆ ಶಿವ ಕುಮಾರ್, ಸಂಘಟನಾ ಕಾರ್ಯದರ್ಶಿ ಬಸವಣ್ಣ, ಮುಖಂಡರಾದ ಶಿವಪ್ರಸಾದ್, ಕರಿಯಪ್ಪ, ಪ್ರಸಾದ್, ಜಡೇಸ್ವಾಮಿ, ನಾಗ ರಾಜು, ಮಹೇಶ್, ವೀರಣ್ಣ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Translate »