ಹೆಚ್.ಡಿ.ಕೋಟೆ ತಾಲೂಕಿನ ಅಕ್ರಮ ಗಣಿಗಾರಿಕೆ ತಡೆಯಲು ರೈತ ಸಂಘ ಆಗ್ರಹ
ಮೈಸೂರು

ಹೆಚ್.ಡಿ.ಕೋಟೆ ತಾಲೂಕಿನ ಅಕ್ರಮ ಗಣಿಗಾರಿಕೆ ತಡೆಯಲು ರೈತ ಸಂಘ ಆಗ್ರಹ

July 7, 2019

ಮೈಸೂರು,ಜು.6(ಎಂಟಿವೈ)- ಪರಿಸರ ಹಾಗೂ ಸ್ಥಳೀಯ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿ ಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕ ಕೆರೆಯೂರು ಹಾಗೂ ದೊಡ್ಡ ಕೆರೆಯೂರುಗಳ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕಂದೇ ಗಾಲ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂ ವರೆ ವರ್ಷದಿಂದ ಚಿಕ್ಕ ಕೆರೆಯೂರು ಹಾಗೂ ದೊಡ್ಡ ಕೆರೆಯೂರುಗಳ ಸುತ್ತಮುತ್ತ ವ್ಯಾಪಕವಾಗಿ ಕಲ್ಲು ಗಣಿ ಗಾರಿಕೆ ನಡೆಸಲಾಗುತ್ತಿದೆ. ಕೃಷಿ ಭೂಮಿಯನ್ನು ಪಟ್ಟ ಭದ್ರ ಹಿತಾಸಕ್ತಿಗಳು ಖರೀದಿಸಿ ಪ್ರಭಾವಿಗಳ ಶ್ರೀರಕ್ಷೆ ಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಗಣಿಗಾರಿಕೆಗೆ ಭಾರಿ ಪ್ರಮಾಣದಲ್ಲಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಮನೆಗಳು ಬಿರುಕು ಬಿಟ್ಟಿವೆ. ಧೂಳಿನಿಂದ ಹೊಲದಲ್ಲಿ ಬೆಳೆದ ಬೆಳೆ ನಾಶವಾಗುತ್ತಿದೆ. ಅಂತರ್ಜಲ ಕುಸಿಯುತ್ತಿದೆ. ಜಿಲ್ಲಾಡಳಿತ, ಪೆÇಲೀಸ್ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಜಿಲ್ಲಾ ಡಳಿತ ಅಕ್ರಮ ಗಣಿಗಾರಿಕೆ ತಡೆಗೆ ಕ್ರಮ ಕೈಗೊಳ್ಳದಿ ದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ವಿವಿಧ ಉದ್ದೇಶಗಳಿಗಾಗಿ ಸರ್ಕಾರ ರೈತರಿಂದ ವಶ ಪಡಿಸಿಕೊಂಡಿರುವ ಸಾವಿರಾರು ಎಕರೆ ಭೂಮಿ ಇಂದಿಗೂ ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಆದರೂ ವಿವಿಧ ಉದ್ದೇಶಗಳಿಗಾಗಿ ಕೃಷಿ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆ ಯಲ್ಲಿ ಭೂ ಸ್ವಾಧೀನ ಕಾಯ್ದೆ ಸರ್ಕಾರ ಹಿಂಪಡೆ ಯಬೇಕು ಮತ್ತು ಈಗಾಗಲೇ ರೈತರಿಂದ ವಶಪಡಿಸಿ ಕೊಂಡ ಭೂಮಿ ಯಾವುದೇ ಉದ್ದೇಶಗಳಿಗೆ ಬಳಕೆ ಯಾಗದೆ ಉಳಿದಿದ್ದರೆ 2013ರ ಕಾಯ್ದೆಯಂತೆ ರೈತರಿಗೆ ಹಿಂದಿರುಗಿಸಬೇಕೆಂದು ಒತ್ತಾಯಿಸಿದರು.

ವಿಚಾರ ಸಂಕಿರಣ: ಮೈಸೂರಿನ ಜೆ.ಎಲ್.ಬಿ ರಸ್ತೆ ಯಲ್ಲಿರುವ ರೋಟರಿ ಸಭಾಂಗಣದಲ್ಲಿ ಜು.8ರಂದು `ದೇಶದ ಕೃಷಿ ಬಿಕ್ಕಟ್ಟಿಗೆ ಕಾರಣಗಳು ಮತ್ತು ಪರಿ ಹಾರಗಳು’ ಕುರಿತು ವಿಚಾರ ಸಂಕಿರಣ ಆಯೋಜಿಸ ಲಾಗಿದೆ. ದೆಹಲಿಯ ಅಖಿಲ ಭಾರತ ಕ್ರಾಂತಿಕಾರಿ ಕಿಸಾನ್ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸಿಂಗ್ ಠಾಕೂರ್ ವಿಷಯ ಮಂಡಿಸಲಿದ್ದಾರೆ. ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಉದ್ಘಾ ಟಿಸುವರು. ಸಂಘದ ರಾಜ್ಯಾಧ್ಯಕ್ಷ ಡಿ.ಹೆಚ್. ಪೂಜಾರ್ ಅಧ್ಯಕ್ಷತೆ ವಹಿಸಲಿದ್ದು ಹಲವು ಗಣ್ಯರು ಭಾಗಿಯಾಗ ಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಕರ್ನಾಟಕ ರೈತ ಸಂಘದ ಜಿಲ್ಲಾ ಮುಖಂಡರಾದ ದೊರೆಸ್ವಾಮಿ, ರಾಜೇಶ್ ಹರ ದನಹಳ್ಳಿ, ವಿಜಯಕುಮಾರ್, ನಂಜುಂಡಸ್ವಾಮಿ ಇದ್ದರು.

Translate »