ನ್ಯಾಯಬೆಲೆ ಅಂಗಡಿಗಳಲ್ಲಿ ರೈತರು, ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ
ಮೈಸೂರು

ನ್ಯಾಯಬೆಲೆ ಅಂಗಡಿಗಳಲ್ಲಿ ರೈತರು, ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ

June 1, 2019

ಮೈಸೂರು: ಮೈಸೂರು ತಾಲೂಕಿನ ಹಲವು ಗ್ರಾಮಗಳ ನ್ಯಾಯ ಬೆಲೆ ಅಂಗಡಿಗಳಲ್ಲಿ ರೈತರು, ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಅಂಥ ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾ ಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಆಹಾರ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಮೈಸೂರಿನ ಮಿನಿ ವಿಧಾನಸೌಧದಲ್ಲಿ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಕೆಡಿಸಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಆಹಾರ ಇಲಾಖೆ ಕುರಿತ ಚರ್ಚೆ ಸಂದರ್ಭ ದಲ್ಲಿ ಈ ವಿಚಾರ ತಿಳಿಸಿದರು. ನ್ಯಾಯ ಬೆಲೆ ಅಂಗಡಿಗಳು ಅವರು ಹೇಳುವ ಸಮ ಯಕ್ಕೆ ರೈತರು ಹೋಗಬೇಕಂತೆ, ಉಡಾಫೆಯ ಉತ್ತರ ನೀಡುತ್ತಿದ್ದಾರೆ. ಪಡಿತರ ವಿತ ರಣೆಯಲ್ಲಿಯೂ ಅನ್ಯಾಯ ಮಾಡಲಾಗು ತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಪರಿಶೀಲಿಸಿ, ರೈತರು, ಕೂಲಿ ಕಾರ್ಮಿ ಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಇಲಾಖೆ ಅಧಿಕಾರಿ, ಆಲನಹಳ್ಳಿ, ಇಲವಾಲ, ಜಯಪುರ ಸೇರಿದಂತೆ ಆರು ನ್ಯಾಯಬೆಲೆ ಅಂಗಡಿಗಳಿಂದ ಇಂತಹ ದೂರುಗಳು ಬಂದ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತೆ ಇಂತಹ ದೂರುಗಳು ಕೇಳಿ ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಐದು ವರ್ಷವಾದರೂ ನಿರ್ಮಾಣ ವಾಗದ ಟ್ಯಾಂಕ್: ತಾಲೂಕಿನ ನಾಗನಹಳ್ಳಿ ಕಲ್ಲೂರಿನಲ್ಲಿ ನೀರಿನ ಟ್ಯಾಂಕ್ ನಿರ್ಮಾ ಣಕ್ಕೆ ಗುದ್ದಲಿಪೂಜೆ ನಡೆದು ಐದು ವರ್ಷ ವಾದರೂ ಕಾಮಗಾರಿಯೇ ಆರಂಭ ವಾಗಿಲ್ಲದಿರುವ ಬಗ್ಗೆ ತಾಪಂ ಉಪಾಧ್ಯಕ್ಷ ಎನ್.ಬಿ.ಮಂಜು ವಿಷಯ ಪ್ರಸ್ತಾಪಿ ಸಿದರು. 1200 ಜನಸಂಖ್ಯೆ ಇರುವ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಟ್ಯಾಂಕ್ ನಿರ್ಮಿಸಲು ತಾಪಂ ಅನುದಾನ ನೀಡಿತ್ತು. ಅಂದೇ ಸಚಿವ ಜಿ.ಟಿ.ದೇವೇಗೌಡರು ಗುದ್ದಲಿಪೂಜೆ ನೆರವೇರಿಸಿದ್ದರು. ಆದರೆ ಐದು ವರ್ಷ ಕಳೆದರೂ ಕೆಆರ್‍ಐಡಿಎಲ್ ಇಂಜಿನಿ ಯರ್ ನಿರ್ಲಕ್ಷ್ಯದಿಂದ ಕಾಮಗಾರಿ ಆರಂಭವಾಗದಿರುವ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್‍ಐಡಿಎಲ್ ಇಂಜಿನಿಯರ್ ಸಿದ್ಧಿಖಿ, ಟೆಂಡರ್ ಪಡೆದ ಗುತ್ತಿಗೆದಾರ ಕಾಮಗಾರಿ ಕೈಗೊಂಡಿಲ್ಲ. ಒಮ್ಮೆ ನೀಡಿದ ಟೆಂಡರ್ ಬದಲಾಯಿ ಸಲು ಸಾಧ್ಯವಿಲ್ಲ. ಹೀಗಾಗಿ ಗುತ್ತಿಗೆದಾರರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದಾಗ, ಉಪಾಧ್ಯಕ್ಷ ಎನ್.ಬಿ.ಮಂಜು, ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರ ಪೂರ್ಣ ಗೊಳಿಸಲು ಅಧಿಕಾರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಾಪಂ ಇಒ ಕೆ.ಎನ್.ಲಿಂಗ ರಾಜಯ್ಯ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್, ಸಮಿತಿ ಸದಸ್ಯರಾದ ಹನು ಮಂತು, ರಾಣಿ ಸತೀಶ್ ಉಪಸ್ಥಿತರಿದ್ದರು.

Translate »