ಬಜೆಟ್ ಮಂಡನೆ ಹಿನ್ನೆಲೆ ರೈತರೊಂದಿಗೆ ಕೃಷಿ ಸಚಿವರ ಚರ್ಚೆ
ಮೈಸೂರು: ಮುಂದಿನ ತಿಂಗಳು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿ ರುವ ಹಿನ್ನೆಲೆಯಲ್ಲಿ ರೈತರ ಪ್ರಮುಖ ಬೇಡಿಕೆ ಗಳ ಬಗ್ಗೆ ಕೃಷಿ ಸಚಿವ ಶಿವಶಂಕರರೆಡ್ಡಿ, ಮೂರು ಜಿಲ್ಲೆಗಳ ವಿವಿಧ ರೈತ ಮುಖಂಡ ರೊಂದಿಗೆ ಸೋಮವಾರ ಚರ್ಚೆ ನಡೆಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜ ನಗರ ಜಿಲ್ಲೆಗಳ ರೈತ ಮುಖಂಡರ ಸಭೆ ಯಲ್ಲಿ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಗಳು ಚುನಾವಣಾ ಪೂರ್ವ ಘೋಷಣೆ ಯಂತೆ ಈ ಬಾರಿ ಬಜೆಟ್‍ನಲ್ಲಿ ಸಹಕಾರ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಇದಕ್ಕೆ ಯಾವುದೇ ಷರತ್ತುಗಳನ್ನು ವಿಧಿಸ ಬಾರದು ಎಂದು ರೈತ ಮುಖಂಡ ಹೊಸ ಕೋಟೆ ಬಸವರಾಜು, ಸಚಿವರಲ್ಲಿ ಮನವಿ ಮಾಡಿದರು.
ಕಳೆದ ಐದು ವರ್ಷಗಳಿಂದ ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದಲ್ಲಿ ಮಳೆಯಿಲ್ಲದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರ ನೆರವಿಗೆ ನೂತನ ಸರ್ಕಾರ ಧಾವಿಸಬೇಕು. ಆದರೆ, ರೈತರ ಹೆಸರಿನಲ್ಲಿ ರಾಜಕಾರಣ ಸಲ್ಲದು ಎಂದು ಸಚಿವರಲ್ಲಿ ಮನವಿ ಮಾಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ದಲ್ಲಿರುವ ಸಕ್ಕರೆ ಕಾರ್ಖಾನೆಗಳು ಸರಿ ಯಾದ ಸಮಯಕ್ಕೆ ಕಬ್ಬು ಕಟ್ಟಾವು ಮಾಡದೇ, ರೈತರಿಗೆ ಸಾಕಷ್ಟು ತೊಂದರೆ ನೀಡುತ್ತಿವೆ. ಇದರ ಬಗ್ಗೆ ಸಚಿವರು, ಗಮನ ಹರಿಸಬೇಕು. ಹಿಂದಿನ ಸರ್ಕಾರದಲ್ಲಿ ಕೃಷಿ ಆಯೋಗ ಸ್ಥಾಪಿಸಲಾಗಿದೆ. ಆದರೆ, ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ರೂಪಕ್ಕೆ ಬಂದಿಲ್ಲ. ಇದರ ಬಗ್ಗೆ ನೂತನ ಸರ್ಕಾರ ಸ್ಪಷ್ಪ ನಿಲುವು ತಾಳಬೇಕು ಎಂದು ಸಲಹೆ ನೀಡಿದರು.
ಬೆಲೆ ಕುಸಿತ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ಬೆಂಬಲ ಬೆಲೆ ಮೊತ್ತ ತೀರಾ ಕಡಿಮೆಯಾಗಿದ್ದು, ಇದನ್ನು ಮರು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗೆ ಭಿತ್ತನೆ ಬೀಜ, ರಸ ಗೊಬ್ಬರ ದಾಸ್ತಾನು ಬಗ್ಗೆ ಗಮನಹರಿಸಬೇಕು. ರಸಗೊಬ್ಬರ ಹಾಗೂ ಭಿತ್ತನೆ ಬೀಜ ಮಾರಾಟ ಮಳಿಗೆಗಳಲ್ಲಿ ಕೃಷಿ ಇಲಾಖೆ ಅಧಿಕಾರಿ ಗಳಿಂದ ತಪಾಸಣೆ ನಡೆಸಿ, ಗುಣಮಟ್ಟ, ದರ ಪರಿಶೀಲನೆ ನಡೆಸಬೇಕು. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಆಯಾಯ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಬೇಕು. ಅದರಲ್ಲೂ ಕಂದಾಯ ಇಲಾಖೆಯಲ್ಲಿ ಆಗುತ್ತಿರುವ ವಿಳಂಬ ನೀತಿ ಬಗ್ಗೆ ಸಚಿವರ ನೇತೃತ್ವದಲ್ಲಿ ಪರಿಶೀಲನೆ ಯಾಗಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ನದಿ ಪಾತ್ರದ ಜಮೀನು ಗಳಿಗೆ ಸರಿಯಾದ ಸಮಯಕ್ಕೆ ನೀರು ಬೀಡಬೇಕು. ಕೃಷಿ ಚಟುವಟಿಕೆಗಳಿಗೆ ಗುಣ ಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಮಾಡಬೇಕು.
ಕೃಷಿ ಚಟುವಟಿಕೆಗಳಲ್ಲಿ ನೂತನ ತಂತ್ರಜ್ಞಾನ ಅಳವಡಿಕೆ ಮತ್ತು ಸಂಶೋಧನೆ ಬಗ್ಗೆ ಸರ್ಕಾರ ಪ್ರಥಮ ಆದ್ಯತೆ ನೀಡಬೇಕು.