ರಾಜಧಾನಿ ಬೆಂಗಳೂರಲ್ಲಿ ಒಂದೆಡೆ ರೈತರ,  ಮತ್ತೊಂದೆಡೆ ಸಾರಿಗೆ ನೌಕರರ ಪ್ರತಿಭಟನೆ ಭರಾಟೆ

ಬೆಂಗಳೂರು, ಡಿ.10-ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರೈತರು ಮತ್ತು ಸಾರಿಗೆ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು. ಕೃಷಿ ಕಾಯಿದೆಗಳ ತಿದ್ದುಪಡಿ ವಿರುದ್ಧ ರೈತರು ಪ್ರತಿಭಟನೆ ನಡೆಸಿದರೆ, ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟಿಸಿದರು.

ರೈತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದರೆ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಫ್ರೀಡಂ ಪಾರ್ಕ್‍ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸು ತ್ತಿದ್ದ ವೇದಿಕೆಗೆ ತೆರಳಿ ಬೆಂಬಲ ಸೂಚಿಸುವುದರ ಜೊತೆಗೆ ಬೇಡಿಕೆಗಳು ಈಡೇರದಿದ್ದರೆ ನಾಳೆಯಿಂದ (ಶುಕ್ರವಾರ) ಸಾರಿಗೆ ಇಲಾಖೆಯ ನಾಲ್ಕು ವಿಭಾಗ ಗಳಲ್ಲೂ ಸಾರಿಗೆ ಬಂದ್ ಮಾಡುವಂತೆ ಸಲಹೆ ನೀಡಿ ಸಾರಿಗೆ ನೌಕರರೊಂದಿಗೆ ತಾವೂ ಬಂಧನ ಕ್ಕೊಳಗಾದರು.

ಇಂದು ಬೆಳಗ್ಗೆ ಕುಟುಂಬ ಸಮೇತರಾಗಿ ಸಾವಿ ರಾರು ಸಾರಿಗೆ ನೌಕರರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ನಡೆಸಿ, ಧರಣಿ ಆರಂಭಿಸಿ ದರು. ತಮ್ಮ ಬೇಡಿಕೆಗಳನ್ನು ಆಲಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿ ದರು. ಸಚಿವರು ಬಾರದ ಕಾರಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳಲೆತ್ನಿಸಿದರು. ಪೊಲೀಸರು ತಡೆದಾಗ ಫ್ರೀಡಂ ಪಾರ್ಕ್ ಮುಂಭಾಗ ಕಾಳಿದಾಸ ರಸ್ತೆ ತಡೆದು ಪ್ರತಿಭಟನೆ ಆರಂಭಿಸಿದರು.

ಈ ವೇಳೆ ಪೊಲೀಸರು ಕೋಡಿಹಳ್ಳಿ ಚಂದ್ರ ಶೇಖರ್ ಸೇರಿದಂತೆ ಸಾರಿಗೆ ನೌಕರರನ್ನು ವಶಕ್ಕೆ ತೆಗೆದು ಕೊಂಡು ಬಿಎಂಟಿಸಿ ಬಸ್‍ಗಳಲ್ಲಿ ಕರೆದೊಯ್ದರು. ಈ ಸಂದರ್ಭದಲ್ಲಿ ಕೆಲ ಸಾರಿಗೆ ನೌಕರರು ಬಿಎಂ ಟಿಸಿ ಚಾಲಕನ ಮೇಲೆ ಕಲ್ಲು ತೂರಾಟ ನಡೆಸಿದರು.

ಅತ್ತ ರೈತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪೊಲೀಸರು ಅವರನ್ನು ತಡೆದು ಮಾತುಕತೆ ನಡೆಸಿದ ನಂತರ ರೈತ ಐಕ್ಯ ಸಮಿತಿಯ 15 ಮಂದಿ ಮುಖಂಡರು ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಯಿತು. ರಾಜ್ಯಪಾಲ ರನ್ನು ಭೇಟಿ ಮಾಡಿದ ರೈತ ಮುಖಂಡರು, ಕೃಷಿ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದರು. ಅಲ್ಲದೇ ಕಾಯಿದೆ ಬಗ್ಗೆ ರೈತರಲ್ಲಿ ಇರುವ ಆತಂಕವನ್ನು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.

ಮತ್ತೊಂದೆಡೆ ವಿಧಾನಸೌಧದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಲ್ನ ಡಿಗೆಯಲ್ಲೇ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ ಕೃಷಿ ತಿದ್ದುಪಡಿ ಮಸೂದೆಯ ಪ್ರತಿಗಳನ್ನು ದಹಿಸಿದರು.