ಮೈಸೂರಲ್ಲಿ ರೈತರ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ರೈತರ ಪ್ರತಿಭಟನೆ

January 29, 2019

ಮೈಸೂರು: ಭತ್ತ ಖರೀದಿಯ ವಿಳಂಬದಿಂದ ಉಂಟಾದ ನಷ್ಟ ಭರಿಸಲು ಕ್ವಿಂಟಾಲ್ ಭತ್ತಕ್ಕೆ 500 ರೂ. ಪರಿಹಾರ ನೀಡಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಜಿ.ಮಾರಳ್ಳಿ ಮಂಜು ನೇತೃತ್ವ ದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು, ಎಪಿಎಂಸಿಗೆ ಭತ್ತ ಖರೀದಿ ಜವಾಬ್ದಾರಿ ವಹಿಸಬೇಕು, ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಬೇಕು, ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂಬಿತ್ಯಾದಿ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಯ್‍ಗೌಡ, ಎಂ.ಎಸ್. ರಾಜೇಂದ್ರ, ಗಿರೀಶ, ಶಿವರಾಜು, ಶಿವಣ್ಣ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Translate »