ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ
ಮೈಸೂರು

ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ

July 7, 2018

ಮೈಸೂರು:  ಭರ್ತಿಯಾಗಿರುವ ಕಬಿನಿ ಜಲಾಶಯದಿಂದ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗ ಬೇಕೆಂದು ಆಗ್ರಹಿಸಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಶುಕ್ರವಾರ ಮೈಸೂ ರಿನ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಾಡಾ ಕಚೇರಿ ಬಳಿ ಜಮಾಯಿಸಿದ ರೈತರು, ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳಾಗಿದ್ದರೂ ರೈತರ ಕೃಷಿ ಚಟುವಟಿಕೆಗಳಿಗೆ, ಕೆರೆ ಕಟ್ಟೆಗಳಿಗೆ ನೀರು ಬಿಡು ಗಡೆ ಮಾಡದೇ, ತಮಿಳುನಾಡಿಗೆ 25 ಟಿಎಂಸಿಯಷ್ಟು ನೀರು ಹರಿಸಲಾಗುತ್ತಿರುವುದÀನ್ನು ಖಂಡಿಸಿದರು. ಎರಡು ವರ್ಷದಿಂದ ಕಬಿನಿ ಅಚ್ಚುಕಟ್ಟು ರೈತರು ಯಾವುದೇ ಬೆಳೆ ಬೆಳೆಯಲಾಗದೆ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ದೂರಿದರು.

ಕಳೆದ ಬಾರಿ ತಮಿಳುನಾಡಿಗೆ ನೀರು ಹರಿಸಿದ್ದರಿಂದ ಇಲ್ಲಿನ ರೈತರಿಗೆ ನೀರಿಲ್ಲದಂತಾಗಿ, ಸಂಕಷ್ಟಕ್ಕೆ ಸಿಲುಕಿದ್ದರು. ಅದೇ ರೀತಿ ಈ ಬಾರಿಯೂ ತಮಿಳುನಾಡಿಗೆ ನೀರು ಹರಿಸಿ ಮತ್ತೊಮ್ಮೆ ಈ ಭಾಗದ ರೈತರಿಗೆ ಅದೇ ಪರಿಸ್ಥಿತಿ ಬರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ತಕ್ಷಣ ಜಲಾಶಯ ದಿಂದ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ದರು. ಕೆಆರ್‍ಎಸ್ ಜಲಾಶಯ ಭರ್ತಿಯಾಗದಿದ್ದರೂ ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಲಾಗು ತ್ತಿದೆ. ಆದರೆ ಕಬಿನಿ ಜಲಾಶಯ ಭರ್ತಿಯಾಗಿದ್ದರೂ ನಾಲೆಗಳಿಗೆ ನೀರು ಹರಿಸದೆ ತಮಿಳುನಾಡಿಗೆ ನೀರು ಬಿಡು ಗಡೆ ಮಾಡಲಾಗುತ್ತಿದೆ. ಕೂಡಲೇ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾ ರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಕಬಿನಿ ಅಚ್ಚುಕಟ್ಟು ಭಾಗದ ರೈತರಿಗೆ ವರ್ಷದಿಂದ ನೀರಿಲ್ಲ. ಜಲಾ ಶಯ ಭರ್ತಿಯಾಗಿದ್ದು, ರೈತರಿಗೆ ನೀರು ಬಿಡುವ ಯಾವುದೇ ಚರ್ಚೆ ನಡೆದಿಲ್ಲ. ನಮಗೆ ನೀರು ನೀಡದೆ ತಮಿಳು ನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಖಂಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರಗೂರು ಶಂಕರ್, ಮುಖಂಡರಾದ ಕೆರೆ ಹುಂಡಿ ರಾಜಣ್ಣ, ಬಿ.ಪಿ.ಪರಶಿವಮೂರ್ತಿ, ತಾಲೂಕು ಅಧ್ಯಕ್ಷರಾದ ಕುರುಬೂರು ಸಿದ್ದೇಶ್, ಮಾದಪ್ಪ, ವರಕೋಡು ಕೃಷ್ಣೇಗೌಡ, ಪುಷ್ಪಪ್ರಸಾದ್, ಮಣ ಕಂಡ ಮತ್ತಿತರರಿದ್ದರು.

Translate »