ಯಳಂದೂರಿನಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
ಚಾಮರಾಜನಗರ

ಯಳಂದೂರಿನಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

June 20, 2018

ಯಳಂದೂರು: ರೈತರು ಕೃಷಿ ಚಟುವಟಿಕೆಗೆ ಬ್ಯಾಂಕ್‍ಗಳಲ್ಲಿ ಚಿನ್ನ ಗಿರಿವಿ ಇಟ್ಟಿರು ವುದನ್ನು ಹರಾಜು ಮಾಡಲು ಬ್ಯಾಂಕ್ ಅಧಿಕಾರಿಗಳು ಮುಂದಾಗಿದ್ದರಿಂದ ರೈತರು ಪ್ರತಿಭಟನೆ ನಡೆಸಿದರು ಪಟ್ಟಣದ ಕೆನರಾ ಬ್ಯಾಂಕ್ ಮತ್ತು ಎಸ್‍ಬಿಐ ಬ್ಯಾಂಕ್‍ಗಳಲ್ಲಿ ರೈತರು ಕೃಷಿ ಗಾಗಿ ಚಿನ್ನ ಗಿರಿವಿ ಇಟ್ಟಿದ್ದರು. ಗಿರಿವಿ ರೈತರ ಅವಧಿ ಮುಗಿದಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹರಾಜು ಮಾಡಲು ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದ ರೈತರು ಫಸಲಿಗೆ ನಿಗದಿತ ಬೆಲೆ ಇಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ರಾಜ್ಯ ಮತ್ತು ಕೇಂದ್ರ ಸರಕಾರ ಈಗಾಗಲೇ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತಿದ್ದಾರೆ. ಈ ಮಧ್ಯೆ ಬ್ಯಾಂಕ್ ಅಧಿಕಾರಿಗಳು ಏಕಾಏಕೀ ರೈತರ ಚಿನ್ನ ಹರಾಜು ಮಾಡುತ್ತಿದ್ದು, ಇದು ಖಂಡನೀಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ಅವಮಾನ ಸಹಿಸದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಯಾರು ಹೊಣೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಬ್ಯಾಂಕ್ ಅಧಿಕಾರಿಗಳನ್ನು ತರಾಟೆ ತಗೆದು ಕೊಂಡರು. ನಂತರ ಎಸ್‍ಬಿಐ ಬ್ಯಾಂಕ್ ವ್ಯವಸ್ಥಾಪಕಿ ಗೀತಾ ಸ್ಥಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಆದೇಶದ ಅನ್ವಯ ಚಿನ್ನವನ್ನು ಹರಾಜು ಮಾಡಲಾಗುತ್ತಿದೆ. ಮತ್ತೆ ಬ್ಯಾಂಕ್ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹರಾಜು ಪಕ್ರಿಯೆಯನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ಸರಕಾರ ಆದೇಶ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಸಿದ್ದಲಿಂಗಸ್ವಾಮಿ, ಶ್ರೀನಿವಾಸ್, ನಂಜುಂಡಸ್ವಾಮಿ ಇತರರು ಇದ್ದರು.

Translate »