ಹೇಮಾವತಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ
ಹಾಸನ

ಹೇಮಾವತಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

November 14, 2018

ಚನ್ನರಾಯಪಟ್ಟಣ: ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಗೆ ಸೋಮವಾರ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತ ನಾಯಕ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಭೂಮಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂರಾರು ರೈತರು ಹೇಮಾವತಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಕಾರ್ಖಾ ನೆಯ ಮಾಲೀಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು.

ಕಳೆದ ಅನೇಕ ವರ್ಷಗಳಿಂದ ಸುಮಾರು ರೈತರಿಗೆ 18 ಕೋಟಿ ಹಣ ಬಾಕಿ ಉಳಿಸಿ ಕೊಂಡಿದ್ದು ಈ ಬಗ್ಗೆ ಕಳೆದೊಂದು ತಿಂಗಳಿಂದ ರೈತ ಸಂಘ ಸೇರಿದಂತೆ ಅನೇಕ ಸಂಘ ಟನೆಗಳು ಹಣ ಪಾವತಿಸುವುದಕ್ಕೆ ಗಡುವು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ರಾಜ್ಯ ಕಾರ್ಯಾಧ್ಯಕ್ಷ ಅರಳಾಪುರ ಮಂಜೇಗೌಡ ಹೇಳಿದರು. ಕಳೆದ ಅನೇಕ ವರ್ಷ ಗಳಿಂದ ರೈತರ ಕಬ್ಬಿನ ಬಾಕಿ ಪಾವತಿಸುವಂತೆ ಮನವಿ ನೀಡಿದ್ದರು, ಕಾರ್ಖಾನೆಯ ಆಡಳಿತ ಮಂಡಳಿ ಅಸಡ್ಡೆ ತೋರುತ್ತಿದೆ. ರೈತರ ಕಷ್ಟಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸ್ಪಂದಿಸ ಬೇಕು. ಆದರೆ ಸರ್ಕಾರಗಳು ರೈತರ ಪರವಾಗಿ ನಿಲ್ಲುತ್ತಿಲ್ಲ, ಸರ್ಕಾರ 2,550ರೂ ಹಣವನ್ನು ನಿಗದಿ ಮಾಡಿದ್ದರೂ ಪ್ರತಿ ಟನ್‍ಗೆ ಕಾರ್ಖಾನೆಯು ಮಾತ್ರ 2,100ರೂಗಳನ್ನು ಮಾತ್ರ ನೀಡುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಕಬ್ಬು ಬೆಳೆಯುವ ರೈತರ ಸಮಸ್ಯೆಗಳಿಗೆ ಅತೀ ಶೀಘ್ರವಾಗಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಸ್ಪಂದಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಿದ್ದಪ್ಪ ಹೊನ್ನವರ, ಜಿಲ್ಲಾಧ್ಯಕ್ಷ ಕಣಗಲ್ ಮೂರ್ತಿ, ತಾಲ್ಲೂಕು ಅಧ್ಯೆಕ್ಷೆ ನಾಗರತ್ನ ಚಿನ್ನೇನಹಳ್ಳಿ, ಭೂಮಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜ್‍ಕುಮಾರ್ ಸೇರಿದಂತೆ ವಿವಿಧ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

Translate »