ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಮೈಸೂರು

ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

August 27, 2019

ಮೈಸೂರು, ಆ.26(ಪಿಎಂ)-ನೆರೆ ಹಾವಳಿಗೆ ಸಿಲುಕಿ ಮನೆ-ಮಠ ಕಳೆದು ಕೊಂಡು ಬೆಳೆ ನಷ್ಟದಿಂದ ಕಂಗಾಲಾದ ರೈತರಿಗೆ ಸರ್ಕಾರ ನಿಗದಿಪಡಿಸಿರುವ ಪರಿ ಹಾರ ಮೊತ್ತವನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರ ಶೇಖರ್ ಬಣ) ವತಿಯಿಂದ ಸೋಮ ವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಇತ್ತೀ ಚೆಗೆ ಉಂಟಾದ ಮಳೆ ಹಾನಿಯಿಂದ ರೈತರು ತತ್ತರಿಸಿ ಹೋಗಿದ್ದು, ಒಂದು ಹೊತ್ತಿನ ಊಟಕ್ಕೂ ಬೇಡುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಗಳು ಯಾವುದೇ ತುರ್ತು ಕ್ರಮ ಕೈಗೊಳ್ಳದೇ ತಮ್ಮ ರಾಜಕೀಯ ಮೇಲಾಟದಲ್ಲಿ ಕಾಲ ದೂಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.  ನೆರೆಗೆ ಸಂಬಂಧಿಸಿದಂತೆ ಈಗಾಗಲೇ ನಿಗದಿಪಡಿಸಿರುವ ಪರಿಹಾರದ ಮೊತ್ತ ಅತ್ಯಂತ ಕಡಿಮೆ ಇದ್ದು, ಎಕರೆ ಒಂದಕ್ಕೆ ಕನಿಷ್ಠ 50ರಿಂದ 80 ಸಾವಿರ ರೂ. ಹಾಗೂ ಮನೆ ಆಸ್ತಿ-ಪಾಸ್ತಿ ಕಳೆದು ಕೊಂಡವರಿಗೆ 7ರಿಂದ 8 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಬೆಳೆಗೆ ಕನಿಷ್ಠ ಬೆಲೆ ನೀಡದೇ ಇರು ವುದರಿಂದ ರೈತರು ಆತ್ಮಹತ್ಯೆ ಮಾಡಿ ಕೊಳ್ಳುವ ಸನ್ನಿವೇಶ ನಿರ್ಮಾಣವಾಗಿ ದ್ದರೂ ಸರ್ಕಾರಗಳು ಕಣ್ಮುಚ್ಚಿ ಕುಳಿತಿವೆ ಎಂದು ಕಿಡಿಕಾರಿದರು. ಸಂಘದ ಜಿಲ್ಲಾ ಧ್ಯಕ್ಷ ಹೆಚ್.ವಿ.ಕೃಷ್ಣಕುಮಾರ್, ತಾಲ್ಲೂಕು ಅಧ್ಯಕ್ಷ ಬೆಟ್ಟೇಗೌಡ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »