ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ
ಮೈಸೂರು

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

June 16, 2020

ಮೈಸೂರು,ಜೂ.15(ಎಂಟಿವೈ)- ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜನಾಂದೋಲನ ಮಹಾಮೈತ್ರಿಯ ಸಹಯೋಗದಲ್ಲಿ ಸೋಮ ವಾರ ರೈತರು ಧರಣಿ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದ ರೈತರು, ಭೂ ಸುಧಾ ರಣಾ ಕಾಯಿದೆಗೆ ತಿದ್ದುಪಡಿ ಮಾಡದಂತೆ ಆಗ್ರಹಿಸಿದರು. ರಾಜ್ಯದಲ್ಲಿ ಸಣ್ಣ ಹಿಡುವಳಿ ದಾರರ ಸಂಖ್ಯೆ ಹೆಚ್ಚಾಗಿದೆ. ಉಳ್ಳವರು ಹೆಚ್ಚಿನ ಹಣದ ಆಮಿಷ ತೋರಿಸಿ ಭೂಮಿ ಖರೀದಿಸಿ ರೈತರ ಬದುಕನ್ನು ಬೀದಿಗೆ ತಳ್ಳು ತ್ತಾರೆ. ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿದರೆ ರೈತರ ಬದುಕು ಸಂಪೂರ್ಣ ವಾಗಿ ಬೀದಿಗೆ ಬೀಳುತ್ತದೆ. ಇದರಿಂದ ಸಣ್ಣ ರೈತರಿಗೆ ಅಸ್ತಿತ್ವವೇ ಇಲ್ಲದಂತಹ ದುಸ್ಥಿತಿ ನಿರ್ಮಾಣವಾಗುತ್ತದೆ. ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣ ವಾಗುತ್ತದೆ. ದಲಿತರು ಅತ್ಯಂತ ಸಂಕಷ್ಟಕ್ಕೀ ಡಾಗುತ್ತಾರೆ. ರೈತಾಪಿ ಕೃಷಿ ಸಂಸ್ಕøತಿ ಮಾಯ ವಾಗಿ ಬಂಡವಾಳಿಗರ ಕೃಷಿ ಸಂಸ್ಕøತಿ ಬೆಳೆ ಯುತ್ತದೆ. ಆಹಾರ ಸಾರ್ವಭೌಮತ್ವಕ್ಕೆ ಪೆಟ್ಟು ಬಿದ್ದು ಆಹಾರ ಭದ್ರತೆಯ ಹಕ್ಕು ನಾಶ ವಾಗುತ್ತದೆ. ಆಹಾರಕ್ಕಾಗಿ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅಲ್ಲದೆ ಗ್ರಾಹಕರ ಮೇಲೂ ಹೊಡೆತ ಬೀಳುತ್ತದೆ ಎಂದು ಕಿಡಿಕಾರಿದರು.

ಕಾಯ್ದೆಯಿಂದ ಸಂಪತ್ತು ಸೃಷ್ಟಿಸುವ ಉದ್ಯೋಗ ನಾಶವಾಗುತ್ತದೆ. ಬಂಡವಾಳ ಶಾಹಿಗಳು ಕುಲಾಂತರಿ ಬೀಜಗಳ ಬಳಕೆ, ರಾಸಾಯನಿಕ ಕೃಷಿ, ಮೊನೋ ಸಂಸ್ಕøತಿಗೆ ಒತ್ತು ನೀಡಿ ಇಡೀ ಪರಿಸರವೇ ನಾಶವಾಗು ತ್ತದೆ. ಇದರಿಂದ ಆಹಾರ ಸಂಸ್ಕøತಿಗೆ ಪೆಟ್ಟು ಬೀಳುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ನವರು ರೈತ ಹೋರಾಟದಿಂದ ಬಂದವರು. ಗೇಣಿದಾರರ ಪರ ಹೋರಾಟದಲ್ಲಿ ಪಾಲ್ಗೊಂ ಡಿದ್ದವರು. ರೈತರ ಹಿತಾಸಕ್ತಿ ಕಾಯು ವುದಾಗಿ ಹೇಳುತ್ತಲೇ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶ ನೀಡದೆ ಭೂ ಸುಧಾ ರಣಾ ಕಾಯದೆಗೆ ತಿದ್ದುಪಡಿ ತಂದು, ರೈತ ಕುಲಕ್ಕೆ ವಿಷ ಹಾಕಿ ಸಂಪೂರ್ಣವಾಗಿ ಅವರನ್ನು ನಿರ್ವಂಶ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಯ್ದೆಯನ್ನು ಪುನರ್ ವಿಮರ್ಶೆ ಮಾಡಿ ತಿದ್ದುಪಡಿ ತರಲು ಹೊರಟಿರುವುದನ್ನು ಕೈಬಿಡಬೇಕು. ಇಲ್ಲದಿದ್ದಲ್ಲಿ ರೈತ ಸಮುದಾಯದಿಂದ ತೀವ್ರ ರೀತಿಯ ಪ್ರತಿಭಟನೆ ನಡೆಸಬೇಕಾ ಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಹಿರಿಯ ಮುಖಂಡ ಎಂ. ಎಸ್.ಅಶ್ವತ್ಥ ನಾರಾಯಣ ರಾಜೇ ಅರಸ್, ತಾಲೂಕು ಅಧ್ಯಕ್ಷ ಪಿ.ಮರಂಕಯ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೆಟ್ಟಹಳ್ಳಿ ಚಂದ್ರೇ ಗೌಡ, ತಾಲೂಕು ಕಾರ್ಯದರ್ಶಿ ಪ್ರಭಾಕರ್, ತಾಲೂಕು ಸಹಕಾರ್ಯದರ್ಶಿ ಮಂಡಕಳ್ಳಿ ಮಹೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Translate »