ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ರೈತ ಸಂಘದ ಪ್ರತಿಭಟನೆ
ಮೈಸೂರು

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ರೈತ ಸಂಘದ ಪ್ರತಿಭಟನೆ

November 6, 2020

ಮೈಸೂರು, ನ.5(ಪಿಎಂ)- ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿ ಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನು ಸರಿಸುತ್ತಿವೆ. ತಿದ್ದುಪಡಿ ಕಾಯ್ದೆ ಜಾರಿಯಾದರೆ ರೈತರ ಜಮೀನು ಮೊದಲಿಗೆ ದಲ್ಲಾಳಿಗಳ ಪಾಲಾಗಿ, ಬಳಿಕ ಬಂಡವಾಳಶಾಹಿ ಕುಳಗಳ ಒಡೆತನಕ್ಕೆ ಸೇರಲಿವೆ. ಆ ಮೂಲಕ ರೈತರು ಜಮೀನು ಕಳೆದುಕೊಂಡು ಕೂಲಿ ಆಳುಗಳಾಗಿ ದುಡಿಯುವ ಕೆಟ್ಟ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ರೈತರ ಅಭಿವೃದ್ಧಿಗೆ ಪೂರಕವಾಗಿ ಮಾಡಬೇಕಿರುವ ಕಾರ್ಯಗಳು ಎದುರಿದ್ದರೂ ಅವುಗಳತ್ತ ಗಮನ ಹರಿಸದೇ ರೈತರಿಗೆ ಮಾರಕವಾಗುವ ನೀತಿಗಳನ್ನು ಸರ್ಕಾರಗಳು ಜಾರಿಗೊಳಿಸಲು ಉತ್ಸುಕವಾಗಿವೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಎನ್.ಎಸ್.ವರ್ಮಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

 

Translate »