ಕೆ.ಆರ್.ಪೇಟೆ,ಫೆ.28- ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಯುವಕ ನೊಬ್ಬನ ಮೇಲೆ ಮಚ್ಚು ಮತ್ತು ಲಾಂಗ್‍ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಸಂತೆ ಬಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂತೇಬಾಚಹಳ್ಳಿ ಹೋಬಳಿಯ ಹನುಮನಹಳ್ಳಿ ಗ್ರಾಮದ ನಿವಾಸಿ ಕುಮಾರ್ (32) ಅಲಿಯಾಸ್ ಸೀಮೆಎಣ್ಣೆ ಕುಮಾರ್ ಹಲ್ಲೆಯಿಂದ ಗಂಭೀರವಾಗಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಗುರುವಾರ ರಾತ್ರಿ ಸುಮಾರು 8ಗಂಟೆಯ ಸಮಯದಲ್ಲಿ ಕುಮಾರ್ ಅವರು ಸಂತೇಬಾಚಹಳ್ಳಿ ಗ್ರಾಮದ ಸರ್ಕಲ್‍ನಲ್ಲಿ ತನ್ನ ಬೈಕಿಗೆ ಪೆಟ್ರೋಲ್ ಹಾಕಿಸುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ಯುವಕರ ತಂಡವು ಮಚ್ಚು ಮತ್ತು ಲಾಂಗುಗಳಿಂದ ಕುಮಾರ್ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಇವರಿಂದ ತಪ್ಪಿಸಿಕೊಳ್ಳಲು ಮೆಡಿಕಲ್ ಸ್ಟೋರ್ ಒಳಕ್ಕೆ ಹೋದರೂ ಸಹ ಬಿಡದೇ ಹಲ್ಲೆ ನಡೆಸಿ ಅದೇ ಕಾರಿ ನಲ್ಲಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಹಲ್ಲೆಯಿಂದಾಗಿ ಕುಮಾರ್ ಅವರ ಕುತ್ತಿಗೆ ಮತ್ತು ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದೆ.
ಕೆ.ಆರ್.ಪೇಟೆ ಟೌನ್ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಅವರು ವಿಷಯ ತಿಳಿಯುತ್ತಿದ್ದಂತೆಯೇ ಸಂತೇಬಾಚಹಳ್ಳಿಗೆ ದೌಡಾಯಿಸಿ ಗಾಯ ಗೊಂಡಿದ್ದ ಕುಮಾರ್ ಅವರನ್ನು ಬೆಳ್ಳೂರು ಬಿಜೆಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಡರ್ ಸುಧಾಕರ್, ಪಿ.ಎಸ್.ಐ ಬ್ಯಾಟರಾಯಗೌಡ ಮತ್ತಿತರರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗಾಗಿ ಸಂತೇಬಾಚಹಳ್ಳಿಯ ಸಿಸಿ ಕ್ಯಾಮರಾಗಳಲ್ಲಿ ಚಿತ್ರೀಕರಣಗೊಂಡಿರುವ ಮಾಹಿತಿಯ ಅಧಾರ ಮೇಲೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಘಟನೆ ಕುರಿತು ಕೆ.ಆರ್.ಪೇಟೆ ಟೌನ್ ಪೆÇೀಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.