ಹಣೆಬರಹ ತಪ್ಪಿಸಲು ಆಗುವುದಿಲ್ಲ,ಅದರಂತೇ ಎಲ್ಲವೂ ನಡೆಯುತ್ತೆ: ಡಿಕೆಶಿ
ಮೈಸೂರು

ಹಣೆಬರಹ ತಪ್ಪಿಸಲು ಆಗುವುದಿಲ್ಲ,ಅದರಂತೇ ಎಲ್ಲವೂ ನಡೆಯುತ್ತೆ: ಡಿಕೆಶಿ

August 29, 2019

ಬೆಂಗಳೂರು, ಆ.28-ಹಣೆಬರಹದಲ್ಲಿ ಬರೆದಿರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಹಣೆಬರಹದಲ್ಲಿ ಬರೆದಂತೆಯೇ ಎಲ್ಲವೂ ನಡೆಯುತ್ತದೆ. ಹಣೆ ಬರಹದಲ್ಲಿ ನಂಬಿಕೆ ಇಟ್ಟುಕೊಂಡು ಬದುಕುತ್ತಿರುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರ ಸ್ಥಾನದ ಬಗ್ಗೆ ಪಕ್ಷದಲ್ಲಿ ಇನ್ನೂ ಯಾವುದೇ ಸ್ಪಷ್ಟ ತೀರ್ಮಾನ ವಾಗಿಲ್ಲ, ಪ್ರತಿಪಕ್ಷ ನಾಯಕನಾಗುವ ತರಾತುರಿ ಯಲ್ಲಿಯೂ ತಾವು ಇಲ್ಲ. ಚುನಾವಣೆಯಲ್ಲಿ ಸೋತವರೇ ಸಚಿವರು, ಉಪಮುಖ್ಯಮಂತ್ರಿಗಳಾಗಿದ್ದಾರೆ. ಇಂತಹ ಗ್ರಹಚಾರ ತಮಗಿಲ್ಲ ಎಂದ ಅವರು, ತಾವು ಯಾವ ಸ್ಥಾನದ ಆಕಾಂಕ್ಷಿಯೂ ಅಲ್ಲ. ಮಾಧ್ಯಮಗಳು ಹೇಳುವಂತೆ ತಾವು ಎಲ್ಲಿಗೂ ಲಾಬಿ ಮಾಡಲು ಹೋಗಿಲ್ಲ. ಯಾವುದನ್ನೂ ಕಾಡಿಬೇಡಿ ಪಡೆಯಲು ಸಾಧ್ಯವಿಲ್ಲ. ಲಾಬಿ ಮಾಡುವ, ಸ್ವವಿವರ ಕೊಡುವ ಅಗತ್ಯವೂ ಇಲ್ಲ. ಪಕ್ಷ ಹಾಗೂ ಗಾಂಧಿ ಕುಟುಂಬದ ಮೇಲೆ ನಂಬಿಕೆ ಇರುವ ತಮಗೆ ಹೈಕಮಾಂಡ್ ಯಾವುದೇ ಹುದ್ದೆಯನ್ನೂ ಕೊಟ್ಟರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದಾಗಿ ಹೇಳಿದರು. “ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ನಾನೆಂದೂ ಆರೋಪ ಮಾಡಿಲ್ಲ, ಅವರಿಗೆ ನಾನು ಟಾಂಗ್ ನೀಡಿಲ್ಲ, ನನ್ನ ಹೇಳಿಕೆಗಳನ್ನು ತಿರುಚಲಾಗಿದೆ. ವಿರೋಧ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತೇನೆಯೇ ಹೊರತು, ನಮ್ಮ ಪಕ್ಷದ ನಾಯಕರ ಬಗ್ಗೆ ನಾನು ಎಂದಿಗೂ ಮಾತನಾಡುವುದಿಲ್ಲ. ಯಾವುದೇ ರಾಜ ಕೀಯ ಭಿನ್ನಾಭಿಪ್ರಾಯಗಳಿದ್ದರೂ ಸ್ವಪಕ್ಷದ ನಾಯಕರ ವಿರುದ್ಧ ಯಾವುದೇ ಕಾರಣಕ್ಕೂ ಮಾತನಾಡುವುದಿಲ್ಲ” ಎಂದರು.

“ಸಿದ್ದರಾಮಯ್ಯನವರಿಗೆ ಕಾರು, ಮನೆ, ರಾಜಕೀಯ ಇಲ್ಲವೇ? 10 ವರ್ಷಗಳ ಕಾಲ ವಿರೋಧ ಪಕ್ಷದ ನಾಯಕ ರಾಗಿ, ಮುಖ್ಯಮಂತ್ರಿಗಳಾಗಿ, ಶಾಸಕಾಂಗ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ನಾನು ಏಕೆ ಟಾಂಗ್ ನೀಡಬೇಕು? ವಿರೋಧ ಪಕ್ಷದಲ್ಲಿ ನಾನು ಯಾರಿಗೆ ಟಾಂಗ್ ಕೊಡಬೇಕೋ ಅವರಿಗೆ ಕೊಟ್ಟಿ ದ್ದೇನೆ. ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಹಿಂದೆ ಭಿನ್ನಾಭಿಪ್ರಾಯ ಇದ್ದಾಗ ಹೋರಾಟ ಮಾಡಿದ್ದೇವೆ. ಈಗ ಅವರ ಜತೆ ಕೆಲಸ ಮಾಡಿದ ಮೇಲೆ ಅವರ ಬಗ್ಗೆ ಮಾತನಾಡಲು ತಲೆ ಕೆಟ್ಟಿಲ್ಲ. ನಮ್ಮ ನಡುವೆ ಏನೇ ರಾಜ ಕೀಯ ವ್ಯತ್ಯಾಸ ಬಂದರೂ ನಮ್ಮ ಪಕ್ಷದ ನಾಯಕರ ಬಗ್ಗೆ ನಾನು ಆ ರೀತಿ ಮಾತನಾಡುವುದಿಲ್ಲ” ಎಂದರು. ಕೆಪಿಸಿಸಿ ವಿಸರ್ಜನೆಯಾಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರನ್ನೇ ಕೇಳಬೇಕು. ತಾವು ಪಕ್ಷದ ಕಾರ್ಯಕರ್ತ ಮಾತ್ರ ಎಂದರು. ಈಗಾಗಲೇ ನಮ್ಮ ಶಾಸಕಾಂಗ ಪಕ್ಷದ ನಾಯಕ ರಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಲಸ ಅವರು ಮಾಡು ತ್ತಿದ್ದಾರೆ. ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು. ಮಾತಿಗೆ ತಪ್ಪಿ ನಡೆದುಕೊಂಡು, ಆತುರಾತುರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿರುವ ಯಡಿಯೂರಪ್ಪ ಅವರ ಸರ್ಕಾರದ ವೈಫಲ್ಯಗಳ ವಿರುದ್ಧ ಗುರುವಾರ ಪ್ರತಿಭಟನೆ ನಡೆಸ ಲಾಗುತ್ತಿದೆ. ನೆರೆಯಿಂದ ರಸ್ತೆಗೆ ಬಿದ್ದಿರುವ ಸಂತ್ರಸ್ತರಿಗೆ ನೆರವಾಗಲು ಯಡಿಯೂರಪ್ಪ ನವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಅವರು ಈಗಾಗಲೇ ಹೇಳಿರುವಂತೆ ಮನೆ ಬಾಡಿಗೆಗೆ 5 ಸಾವಿರ, ಮನೆ ಕಟ್ಟಲು 5 ಲಕ್ಷ ನೀಡಿಲ್ಲ. ಆದಷ್ಟು ಬೇಗ ಆ ಜನರ ನೋವಿಗೆ ಸ್ಪಂದಿಸಬೇಕು ಎಂದು ಡಿಕೆಶಿ ಆಗ್ರಹಿಸಿದರು.

 

Translate »