ಮೈಸೂರು: ರಾಜ್ಯದಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕಾರ್ಯಕ್ರಮ ಆಯೋಜಿಸಲು ರೂ.5000 ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಿದೆ.
ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿಯನ್ನು ಜೂನ್ 30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002, ಇವರಿಗೆ ಸಲ್ಲಿಸಬೇಕು. ಕಾರ್ಯಕ್ರಮಕ್ಕೂ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯವಾಗಿದೆ.