ಫೆ. 15, 16 ಮುಖ್ಯಮಂತ್ರಿ ಹೆಚ್‍ಡಿಕೆ ಜಿಲ್ಲಾ ಪ್ರವಾಸ
ಹಾಸನ

ಫೆ. 15, 16 ಮುಖ್ಯಮಂತ್ರಿ ಹೆಚ್‍ಡಿಕೆ ಜಿಲ್ಲಾ ಪ್ರವಾಸ

February 13, 2019

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಜಿಲ್ಲಾಡಳಿತದಿಂದ ಪೂರ್ವ ತಯಾರಿ
ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಫೆ. 15 ಮತ್ತು 16ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳಿಗೆ ವಿವಿಧ ನಿರ್ದೇ ಶನಗಳನ್ನು ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಅವರ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಯಾಗದಂತೆ ಎಚ್ಚರ ವಹಿಸುವ ಜೊತೆಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಫೆ. 15ರಂದು ಮಧ್ಯಾಹ್ನ 2.30ಕ್ಕೆ ಸಾತೇನ ಹಳ್ಳಿಗೆ ಹಾಗೂ 3.30ಕ್ಕೆ ದುದ್ದದಲ್ಲಿ ಮುಖ್ಯಮಂತ್ರಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುವರು. 5 ಗಂಟೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಕಾಮಗಾರಿ ಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಫೆ. 15ರಂದು ಸಂಜೆ 5.30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಾಲಮನ್ನಾ ಫಲಾನು ಭವಿಗಳಿಗೆ ತೀರುವಳಿ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೆ ಸಹಕಾರ ಇಲಾಖೆ ಮತ್ತು ಲೀಡ್ ಬ್ಯಾಂಕ್ ಅಗತ್ಯ ಸಿದ್ಧತೆ ಮಾಡಿಕೊಂಡು, ಎಲ್ಲಾ ತಾಲೂಕಿನಿಂದಲೂ ರೈತರನ್ನು ಕರೆ ತರಬೇಕು ಎಂದರು.
ಫೆ. 16ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಆರೋಗ್ಯ ಮೇಳ ಉದ್ಘಾ ಟಿಸಲಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ ತಜ್ಞ ವೈದ್ಯರು ಆಗಮಿಸುತ್ತಿರುವುದರಿಂದ ಹೆಚ್ಚಿನ ಜನರಿಗೆ ಇದರ ಲಾಭ ದೊರೆಯ ಬೇಕು. ಹಾಗಾಗಿ ವ್ಯಾಪಕ ಪ್ರಚಾರ ಕೈಗೊಳ್ಳ ಬೇಕು ಎಂದು ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪುಟ್ಟಸ್ವಾಮಿ ಮಾತನಾಡಿ, 400ಕ್ಕೂ ಅಧಿಕ ವೈದ್ಯರು ಆಗಮಿಸುತ್ತಿ ದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಮಾಡ ಲಾಗಿದ್ದು. ಪಿಡಿಓಗಳು ಮತ್ತು ಆಶಾ ಕಾರ್ಯಕರ್ತೆಯರು ರೋಗಿಗಳನ್ನು ಕರೆತರಲಿದ್ದಾರೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್ ಮಾತನಾಡಿ, ಆರೋಗ್ಯ ಮೇಳಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೈದ್ಯರು ಹಾಗೂ ಔಷಧೋಪಚಾರಗಳಿಗೆ ಯಾವುದೇ ಕೊರತೆ ಇಲ್ಲ. ಖಾಸಗಿ ವೈದ್ಯ ಕೀಯ ಶಿಕ್ಷಣ ಸಂಸ್ಥೆಗಳು ಹಾಗೂ ಔಷಧ ವಿತರಕರು ಕೂಡ ಆರೋಗ್ಯ ಮೇಳಕ್ಕೆ ನೆರವು ನೀಡುತ್ತಿದ್ದಾರೆ ಎಂದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಬಿ.ಎ.ಪರಮೇಶ್, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಸ್.ಎನ್.ಹೆಗ್ಗಡೆ, ಜಂಟಿ ಕೃಷಿ ನಿರ್ದೇಶಕ ಡಾ.ಮಧು ಸೂಧನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂಜಯ್, ಲೋಕೋಪ ಯೋಗಿ ಕಾರ್ಯಪಾಲಕ ಅಭಿಯಂತರ ಮಂಜು, ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಅಭಿಯಂತರ ಆನಂದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

ಫೆ. 17ರಂದು ಕೃಷಿ ಮೇಳ ಹಾಗೂ ಫೆ. 18ರಂದು ಮಹಿಳಾ ಮೇಳ, ಫೆ. 23 ಮತ್ತು 24 ರಂದು ಉದ್ಯೋಗ ಮೇಳ ಗಳು ನಡೆಯಲಿದ್ದು, ಇದಕ್ಕೆ ಅಗತ್ಯ ಸಿದ್ಧತೆ ಗಳನ್ನು ಆಯಾಯ ಇಲಾಖೆಗಳು ಕೈಗೊಳ್ಳ ಬೇಕು. ಮೇಳಕ್ಕೆ ಅಗತ್ಯವಿರುವ ಮಳಿಗೆ ಗಳನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ಮಿಸಿಕೊಡುಬೇಕು
-ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ

Translate »