ಸೋಲಿನ ಭೀತಿ: ತಾಪಂ, ಜಿಪಂ ಚುನಾವಣೆಗೆ ಹಿಂದೇಟು
ಮೈಸೂರು

ಸೋಲಿನ ಭೀತಿ: ತಾಪಂ, ಜಿಪಂ ಚುನಾವಣೆಗೆ ಹಿಂದೇಟು

July 15, 2022

ಮೈಸೂರು, ಜು.14(ಎಂಟಿವೈ)- ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿರುವುದರಿಂದ ಸೋಲಿನ ಭೀತಿಯಿಂ ದಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾ ವಣೆ ನಡೆಸಲು ಮುಂದಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾ ಧ್ಯP್ಷÀ ಆರ್.ಧ್ರುವನಾರಾಯಣ ಆರೋಪಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿ ವತಿಯಿಂದ ಆಯೋಜಿಸಿದ್ದ ಪಂಚಾಯತ್ ರಾಜ್ ಸಮ್ಮೇಳನ ಹಾಗೂ ವಿವಿಧ ವಿಧಾನಸಭಾ ಕ್ಷೇತ್ರಗಳ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಅಭಿವೃದ್ಧಿಯನ್ನು ಕಡೆಗಣಿಸಿದ್ದರಿಂದ ಎಲ್ಲೆಡೆ ಟೀಕೆಗೆ ಗುರಿಯಾಗುತ್ತಿದೆ. ಇತ್ತೀಚೆಗೆ ವಿಧಾನಪರಿಷತ್‍ಗೆ ನಡೆದ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಕಂಡು ಬಿಜೆಪಿಗೆ ಆತಂಕವುಂಟಾಗಿದೆ. ಮೇಲ್ಮನೆ ಚುನಾವಣೆಯಲ್ಲಿ ಆಡಳಿ ತಾರೂಢ ಬಿಜೆಪಿಗಿಂತ ಕಾಂಗ್ರೆಸ್‍ಗೆ ಶೇ.6-7ರಷ್ಟು ಹೆಚ್ಚಿನ ಮತ ಲಭಿಸಿದೆ. ಈ ಹಿನ್ನೆಲೆಯಲ್ಲಿ ಜಿ.ಪಂ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆದರೇ ಸೋಲುತ್ತೇವೆ ಎನ್ನುವ ಭಯದಿಂದ ಚುನಾವಣೆಯನ್ನು ಮುಂದೂಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟುತ್ತದೆ. ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಪಂ ಮಟ್ಟದಲ್ಲಿ ವಿವಿಧ ಯೋಜನೆ ಗಳು ಅನುಷ್ಠಾನಗೊಳ್ಳಲಿವೆ. ಕಳೆದ ಒಂದೂವರೆ ವರ್ಷ ದಿಂದ ಜಿಪಂ, ತಾಪಂನಲ್ಲಿ ಜನಪ್ರತಿನಿಧಿಗಳು ಇಲ್ಲದೇ ಇರುವುದರಿಂದ ಸಾರ್ವಜನಿಕರು ಎಲ್ಲದಕ್ಕೂ ಶಾಸಕರ ಬಳಿ ಬರಬೇಕಾದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ದಿ.ರಾಜೀವ್‍ಗಾಂಧಿ ಅವರು ಪ್ರಧಾನಮಂತ್ರಿಯಾಗಿ ದ್ದಾಗ ಸ್ಥಳೀಯ ಜನರಿಗೆ ಅಧಿಕಾರವನ್ನು ನೀಡಿದರೆ ಸುಸ್ಥಿರ ಅಭಿವೃದ್ಧಿ ಸಾಧ್ಯ ಎಂಬ ಮುಂದಾಲೋಚನೆ ಯಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿ ಗೊಳಿಸಲಾಗಿತ್ತು. ಅಲ್ಲದೇ ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ಹೆಚ್ಚಿನ ಅನುದಾನ ನೀಡುವ ಮೂಲಕ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲಾಗುತ್ತಿತ್ತು. ಆದರೆ ಇದೀಗ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳನ್ನು ಕಡೆಗಣಿಸು ತ್ತಿದೆ ಎಂದು ಆರೋಪಿಸಿದರು.
ಪ್ರತಿ ಜಿಲ್ಲೆಯಲ್ಲೂ 75 ಕಿ.ಮೀ. ಪಾದಯಾತ್ರೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ ಎಐಸಿಸಿ ವತಿಯಿಂದ ವಿವಿಧ ಕಾರ್ಯಕ್ರಮ ನಡೆಸಲು ಉದ್ದೇಶಿಸÀಲಾಗಿದೆ. ಪ್ರತಿ ಜಿ¯್ಲÉಯಲ್ಲಿ 75 ಕಿಲೋಮೀಟರ್ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಚಾಮರಾಜ ನಗರ ಜಿ¯್ಲÉಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಸುಮಾರು 80 ಕಿ.ಮೀ. ಬರುವುದರಿಂದ ಒಂದೇ ಸಲ 5 ದಿನಗಳ ಕಾಲ ಪಾದಯಾತ್ರೆ ಮಾಡಲಾಗುತ್ತದೆ. ಮೈಸೂರು ನಗರವನ್ನು ಹೊರತುಪಡಿಸಿ ಗ್ರಾಮಾಂತರದ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ವಿಸ್ತಾರವಾಗಿರುವುದ ರಿಂದ ಯಾವ ರೀತಿ ಕಾರ್ಯಕ್ರಮ ಆಯೋಜಿಸಬೇಕು ಎನ್ನುವುದನ್ನು ತೀರ್ಮಾನಿಸಬೇಕಾಗಿದೆ ಎಂದರು.

ಸ್ವಾತಂತ್ರ್ಯದ ಸಂಭ್ರಮಕ್ಕಾಗಿ ಪಾದಯಾತ್ರೆ: ಆ.15ರಂದು ಬೆಂಗಳೂರಿನಲ್ಲಿ ಸುಮಾರು 1 ಲP್ಷÀ ಕಾರ್ಯಕರ್ತ ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ಸರ್ಕಾರದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯ ಕ್ರಮ ಜರುಗುವುದರಿಂದ ಮಧ್ಯಾಹ್ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಒಂದು ಲಕ್ಷಕ್ಕೂ ಅಧಿಕ ಮಂದಿ ಪಕ್ಷದ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಕೊಂಡು ಪಾದಯಾತ್ರೆ ಆರಂಭಿಸಲಿದ್ದಾರೆ. ಜಯನಗ ರದ ನ್ಯಾಷನಲï ಕಾಲೇಜು ಮೈದಾನದಲ್ಲಿ ಮುಕ್ತಾಯ ವಾಗುತ್ತದೆ. ಅಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದೆ. ಇದರಲ್ಲಿ ಭಾಗವಹಿಸುವವರು ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಶಾಸಕ ಅನಿಲï ಚಿಕ್ಕಮಾದು ಮಾತನಾಡಿದರು. ಕೆಪಿಸಿಸಿ ಉಪಾಧ್ಯP್ಷÀ ಸೂರಜ್ ಹೆಗ್ಡೆ, ರಾಜೀವ್‍ಗಾಂಧಿ ಪಂಚಾ ಯತ್ ರಾಜ್ ರಾಜ್ಯ ಸಮಿತಿ ಅಧ್ಯP್ಷÀ ಸಿ.ನಾರಾಯಣ ಸ್ವಾಮಿ, ಸಲಹಾ ಸಮಿತಿ ಸದಸ್ಯ ಘೋರ್ಪಡೆ, ಜಿ¯್ಲÁ ಗ್ರಾಮಾಂತರ ಅಧ್ಯP್ಷÀ ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಅಧ್ಯP್ಷÀ ಕೆ.ಮರೀಗೌಡ, ಕೆಪಿಸಿಸಿ ಕಾರ್ಯದರ್ಶಿ ನಾಗವಾಲ ನರೇಂದ್ರ, ಮುಖಂಡರಾದ ಜಿ.ವಿ.ಸೀತಾ ರಾಮ್, ಹೆಡತಲೆ ಮಂಜುನಾಥ್, ವೆಂಕಟರಾಮು, ಬಸವಣ್ಣ, ಉಮಾಶಂಕರ್ ಇನ್ನಿತರರು ಪಾಲ್ಗೊಂಡಿದ್ದರು.

Translate »