ಇಂದು ಸಾಹಿತಿ ಡಾ. ದೊಡ್ಡರಂಗೇಗೌಡರಿಗೆ ಅಭಿನಂದನೆ
ಮೈಸೂರು

ಇಂದು ಸಾಹಿತಿ ಡಾ. ದೊಡ್ಡರಂಗೇಗೌಡರಿಗೆ ಅಭಿನಂದನೆ

June 17, 2018

ಮೈಸೂರು: ಮೈಸೂರಿನ ಹೇಮಗಂಗಾ ಕಾವ್ಯ ಬಳಗದ ವತಿಯಿಂದ ಜೂ.17ರಂದು ಬೆಳಿಗ್ಗೆ 11 ಗಂಟೆಗೆ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರಿಗೆ ಅಭಿನಂದನಾ ಸಮಾರಂಭ ಕವಿ ಸಮ್ಮೇಳನ ಏರ್ಪಡಿಸಲಾಗಿದೆ. ಸಮಾಜ ಸೇವಕ ಡಾ. ಕೆ.ರಘುರಾಂ ವಾಜಪೇಯಿ ಕಾರ್ಯ ಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಶ್ರೀಮತಿ ಎ.ಹೇಮಗಂಗಾ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಜಯಪ್ಪ ಹೊನ್ನಾಳಿ ಅಭಿನಂದನಾ ನುಡಿ ನುಡಿಯಲಿದ್ದು, ಸಮಾಜ ಸೇವಕ ಡಾ. ಭೇರ್ಯ ರಾಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀಕಂಠ ಶರ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಹಿರಿಯ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅಭಿನಂದನೆ ಸ್ವೀಕರಿಸಲಿದ್ದಾರೆ. ಕವಿ ಸಮ್ಮೇಳನದ ಅಧ್ಯಕ್ಷತೆ ಯನ್ನು ಹಿರಿಯ ಸಾಹಿತಿ ಮಹದೇವ ನಾಯಕ ಕೂಡ್ಲಾಪುರ ವಹಿಸಲಿದ್ದಾರೆ.

Translate »