ಫೀ.ಮಾ. ಕಾರಿಯಪ್ಪರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ
ಕೊಡಗು

ಫೀ.ಮಾ. ಕಾರಿಯಪ್ಪರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ

January 29, 2019

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಬಣ್ಣಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಆವರಣದಲ್ಲಿ ಸೋಮವಾರ ನಡೆದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ 120ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸು ವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಅವರು ಹೇಳಿದರು.

ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರಿಯಪ್ಪ (ನಂದಾ) ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸಮಾಜದ ಬಗ್ಗೆ ಸದಾ ಕಾಳಜಿ ಹೊಂದಿ ದ್ದರು. ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪÀ್ಪ ಅವರು ಆಡಂಬರ ಮತ್ತು ದುಂದುವೆಚ್ಚ ಇಷ್ಟ ಪಡುತ್ತಿರಲಿಲ್ಲ. ಅದರ ಬದಲಾಗಿ ಸಂಕಷ್ಟದಲ್ಲಿರು ವವರಿಗೆ ನೆರವಾಗಬೇಕು ಎಂಬ ಉದ್ದೇಶ ಹೊಂದಿದ್ದರು. ಪ್ರತಿಯೊಬ್ಬರೂ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂಬು ದನ್ನು ಬಯಸುತ್ತಿದ್ದರು ಎಂದು ಅವರು ಹೇಳಿದರು.
ಕಳೆದ ಆಗಸ್ಟ್‍ನಲ್ಲಿ ಸುರಿದ ಧಾರಾಕಾರ ಮಳೆ ಯಿಂದಾಗಿ ಕೊಡಗಿನ ಜನರು ತತ್ತರಿಸಿ ಹೋಗಿ ದ್ದರು. ಸದ್ಯ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಆ ಸಂದರ್ಭದಲ್ಲಿ ಇಡೀ ರಾಜ್ಯದ, ದೇಶದ ಜನತೆ ಕೊಡಗಿನ ಜನರಿಗೆ ಸ್ಪಂದಿಸಿದ್ದಾರೆ ಎಂದು ಏರ್ ಮಾರ್ಷಲ್ ಕಾರಿಯಪ್ಪ ಸ್ಮರಿಸಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ (ನಿವೃತ್ತ) ಕಂಡ್ರತಂಡ ಸುಬ್ಬಯ್ಯ ಮಾತನಾಡಿ, ದೇಶದ ಮೂರು ಸೇನೆಗಳ ಪ್ರಥಮ ಮಹಾ ದಂಡನಾಯಕರಾಗಿ ಕಾರಿಯಪ್ಪ ಅವರು ಸೇನಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಶಕ್ತಿ, ಮಾನವೀಯತೆ, ಸರಳತೆ ಪ್ರತಿಯೊಬ್ಬರೂ ಅನು ಸರಿಸಬೇಕು. ಎನ್‍ಸಿಸಿಯನ್ನು ಆರಂಭಿಸಿದವರು ಕಾರಿಯಪ್ಪ ಅವರೇ ಎಂದು ಅವರು ತಿಳಿಸಿದರು.

ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರನ್ನು ಇಡೀ ರಾಷ್ಟ್ರವೇ ಪ್ರಶಂಸೆ ಮಾಡುತ್ತದೆ. ಆ ರೀತಿ ಸೇನೆ ಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಭಾರತೀಯ ಸೇನೆ ಇಂದಿಗೂ ಸಹ ಬಲಿಷ್ಠವಾಗಿ ರಲು ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಕಾರ್ಯ ದಕ್ಷತೆಯೇ ಕಾರಣ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ರಾಷ್ಟ್ರಗಳಲ್ಲಿ ರಾಯ ಭಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾರಿಯಪ್ಪ ಅವರ ಆದರ್ಶ ಜೀವನವನ್ನು ಅನುಸರಿಸಬೇಕು ಎಂದು ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಯಿಂದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಕುರಿತು ಹೊರ ತಂದಿರುವ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಬಿಡುಗಡೆ ಮಾಡಿದರು.

ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಅಪ ರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಏರ್ ಮಾರ್ಷಲ್ ಕೆ.ಸಿ.ಕಾರಿಯಪ್ಪ ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ, ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಎನ್‍ಸಿಸಿ ಕಮಾಂಡರ್ ನಾಯಕ್, ರಾಘವ, ಉಳ್ಳಿಯಡ ಎಂ. ಪೂವಯ್ಯ, ಇತರರು ಇದ್ದರು.

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಯರು ದೇಶ ಭಕ್ತಿಗೀತೆ ಹಾಡಿದರು. ಮುಕ್ಕೋಡ್ಲು ತಂಡದವರು ಕತ್ತಿಯಾಟ್ ಪ್ರದರ್ಶನ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಸ್ವಾಗತಿಸಿದರು. ಗಿರೀಶ್ ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪೆಮ್ಮಂಡ ಕೆ.ಪೊನ್ನಪ್ಪ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರಿಯಪ್ಪ, ಫೀಲ್ಡ್ ಮಾರ್ಷಲ್ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷರಾದ ಕರ್ನಲ್ ಕೆ.ಸಿ.ಸುಬ್ಬಯ್ಯ, ಫೋರಂ ಸಂಚಾಲಕರಾದ ಮೇಜರ್ ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಡಿವೈಎಸ್‍ಪಿ ಸುಂದರರಾಜ್ ಇತರರು ಕಾರಿಯಪ್ಪ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ವಾದ್ಯ ತಂಡದ ವರು ರಾಷ್ಟ್ರಗೀತೆ ನುಡಿಸಿದರು. ಬಳಿಕ ಮೆರವಣಿಗೆಗೆ ಗಣ್ಯರು ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಪೊಲೀಸ್ ವಾದ್ಯ ವೃಂದ, ಎನ್‍ಸಿಸಿ ತಂಡಗಳು, ಕಂಸಾಳೆ, ಡೊಳ್ಳು ಕುಣಿತ, ಗೊಂಬೆ ಕುಣಿತ, ಸೇವಾ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.

Translate »