6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್
ಮೈಸೂರು

6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್

June 7, 2019

ನವದೆಹಲಿ: ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡ ಬೇಕೆಂದು ಕೇಂದ್ರ ಧನಸಹಾಯ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಆದೇಶ ನೀಡಿದೆ.

ಯುಜಿಸಿಯ ಆದೇಶವನ್ನು ಪಾಲಿಸದಿದ್ದರೆ ಧನಸಹಾಯ ನೆರವನ್ನು ನಿಲ್ಲಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಈ ಕುರಿತು ಕಳೆದ ಮಂಗಳವಾರ ಯುಜಿಸಿ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಬೋಧಕ ಸಿಬ್ಬಂದಿ ಕೊರತೆಯಿದೆ ಎಂಬುದನ್ನು ಯುಜಿಸಿ ಮಾರ್ಗಸೂಚಿಯಲ್ಲಿ ಗಮನಕ್ಕೆ ತಂದಿದೆ.

ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು 15 ದಿನಗಳೊಳಗೆ ಗುರುತಿಸಿ 180 ದಿನಗಳೊಳಗೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣ ಗೊಳಿಸಬೇಕು ಎಂದು ಆಯೋಗ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಈ ನೇಮಕಾತಿ ಪ್ರಕ್ರಿಯೆ ಯಿಂದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾ ಗುತ್ತದೆ. ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಸುಮಾರು 6,100 ಬೋಧಕ ಹುದ್ದೆಗಳಿದ್ದು, ಅವುಗಳಲ್ಲಿ 4 ಸಾವಿರ ಹುದ್ದೆಗಳು ದೆಹಲಿ ವಿಶ್ವವಿದ್ಯಾಲಯವೊಂದ ರಲ್ಲಿಯೇ ಇದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಗುಣಮಟ್ಟದ ಉಪನ್ಯಾಸಕರ ಕೊರತೆ ಇಂದು ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಎದುರಿಸುತ್ತಿರುವ ಸಮಸ್ಯೆಗಳಲ್ಲೊಂದು. ಇದರಿಂದ ಗುಣಮಟ್ಟದ ಉನ್ನತ ಶಿಕ್ಷಣ ದೊರಕುವುದರ ಮೇಲೆ ಪರಿ ಣಾಮ ಬೀರುತ್ತದೆ. ಹೀಗಾಗಿ ಕಡ್ಡಾಯವಾಗಿ ಯುಜಿಸಿಯ ಮಾರ್ಗಸೂಚಿಯನ್ನು ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳು ಪಾಲಿಸ ಬೇಕಾಗಿದ್ದು ಸಮಯಕ್ಕೆ ಸರಿಯಾಗಿ ಖಾಲಿಯಿ ರುವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ನೇಮಕ ಮಾಡಬೇಕು ಎಂದು ಯುಜಿಸಿ ಹೇಳಿದೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಖಾಲಿಯಿರುವ ಬೋಧಕ ಹುದ್ದೆಗಳು, ಮೀಸಲಾತಿ ವಿವರಗಳನ್ನು ಆನ್‍ಲೈನ್ ಪೆÇೀರ್ಟಲ್‍ನಲ್ಲಿ ಅಪ್‍ಲೋಡ್ ಮಾಡಬೇಕು. ಹುದ್ದೆಗಳನ್ನು ಭರ್ತಿ ಮಾಡುವುದನ್ನು ಪೆÇೀರ್ಟಲ್ ಮೂಲಕ ಯುಜಿಸಿ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ನಿಗಾ ವಹಿಸುತ್ತದೆ ಎಂದು ಯುಜಿಸಿ ಮಾರ್ಗಸೂಚಿಯಲ್ಲಿ ಹೇಳಿದೆ.

Translate »