ಬೆಂಗಳೂರು, ನ.5(ಕೆಎಂಶಿ)- ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯ ಪಡೆಯು ತನ್ನ ಅಂತಿಮ ಶಿಫಾ ರಸುಗಳ ಕರ ಡನ್ನು ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
“ರಾಷ್ಟ್ರೀಯ ಶಿಕ್ಷಣ ನೀತಿ-2020; ವಿಶ್ವಗುರು ವಾಗುವತ್ತ ಭಾರತ” ಎಂಬ ವಿಷಯದ ಬಗ್ಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾ ಲಯ ಗುರುವಾರ ಏರ್ಪಡಿಸಿದ್ದ ವೆಬಿನಾರ್‍ನಲ್ಲಿ ಬೆಂಗಳೂರಿನಿಂದಲೇ ಪಾಲ್ಗೊಂಡು ಮಾತನಾಡಿದ ಅವರು; ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ. ರಂಗನಾಥ್ ಅವರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದ್ದು, ಕಾರ್ಯಪಡೆಯು ಈಗಾಗಲೇ ಪ್ರಾಥಮಿಕ ಹಂತದ ಶಿಫಾರಸುಗಳನ್ನು ಸಲ್ಲಿಸಿದೆ. ಅಂತಿಮ ಹಂತದ ಶಿಫಾರಸುಗಳನ್ನು ಈ ಶನಿ ವಾರ ಸಲ್ಲಿಸಲಿದೆ ಎಂದು ಹೇಳಿದರು.
ಉಳಿದೆಲ್ಲ ರಾಜ್ಯಗಳಿಗಿಂತ ಮೊದಲೇ ಶಿಕ್ಷಣ ನೀತಿಯನ್ನು ಹಂತಹಂತವಾಗಿ ಜಾರಿ ಮಾಡು ವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಾದ ಎಲ್ಲ ಹೆಜ್ಜೆಗಳನ್ನು ಇಡಲಾಗುತ್ತಿದೆ. ಇರುವ ವಿಶ್ವವಿದ್ಯಾಲಯಗಳಲ್ಲಿಯೇ 6 ಸಂಶೋಧನಾ ಹಾಗೂ 10 ಬೋಧನಾ ವಿವಿಗಳನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಳಿದಂತೆ 34 ಶಿಕ್ಷಣ ಸಂಸ್ಥೆಗಳನ್ನು ಸ್ವಾಯತ್ತ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲಾಗುವುದು. ಎಲ್ಲೆಡೆಯು ಬಹು ವಿಷಯಗಳ ಕಲಿಕೆ ಮತ್ತು ಬೋಧನೆಗೆ ಒತ್ತಾಸೆ ನೀಡಲಾಗುತ್ತಿದೆ. ಇದರಿಂದ ಸಮಾಜದಲ್ಲಿರುವ ಸಾಮಾಜಿಕ, ಆರ್ಥಿಕ ಮತ್ತಿತರೆ ಎಲ್ಲ ಸಮಸ್ಯೆಗಳಿಗೆ ಚರಮಗೀತೆ ಹಾಡುವುದು ನಮ್ಮ ಉದ್ದೇಶವಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಈವರೆಗೂ ಪಠ್ಯೇತರ ಚಟುವಟಿಕೆಗೂ ಪಠ್ಯಕ್ಕೂ ಸಂಬಂಧವೇ ಇರುತ್ತಿಲ್ಲ. ಇನ್ನು ಮುಂದೆ ಹಾಗಾಗುವುದಿಲ್ಲ. ಪಠ್ಯೇತರ ವಲಯದಲ್ಲಿದ್ದ ಕ್ರೀಡೆ, ಕಲೆ, ಸಂಗೀತ ಮತ್ತಿತರೆ ವಿಷಯಗಳಲ್ಲಿಯೂ ಪಠ್ಯದ ವ್ಯಾಪ್ತಿಗೇ ಬರುತ್ತವೆ. ಆಗ ಜ್ಞಾನಾರ್ಜನೆಯ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಆಯ್ಕೆ ಹೆಚ್ಚಾಗುತ್ತದೆ. ಅದರಿಂದ ಬಹು ಆಯಾಮದ ಪ್ರತಿಭೆಗಳು ನಮ್ಮ ಶೈಕ್ಷಣಿಕ ವ್ಯವಸ್ಥೆಯಿಂದ ಹೊರಹೊಮ್ಮಲಿವೆ ಎಂದು ಡಿಸಿಎಂ ನುಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು; ಸಮಾಜಕ್ಕೆ ಒಳ್ಳೆಯದಾಗುವ ಹಾಗೂ ಎಲ್ಲ ಹಂತಗಳಲ್ಲೂ ಜ್ಞಾನವನ್ನು ಹೆಚ್ಚಿಸುವ ಕೆಲಸ ಆಗಬೇಕಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ಸಮಾಜಕ್ಕೇ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಬೋಧಕರ ಪಾತ್ರ ಅತಿದೊಡ್ಡದು ಎಂದರು.