ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲು
ಮೈಸೂರು

ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲು

June 16, 2020

ಮಧ್ಯಪ್ರದೇಶ,ಜೂ.15-ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೆÇಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರು ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಟ್ವಿಟರ್‍ನಲ್ಲಿ ನಕಲಿ ವಿಡಿಯೋ ಹಾಕುವ ಮೂಲಕ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸನ್ನು ಕುಗ್ಗಿಸಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಉಲ್ಲೇಖಿಸಿದ್ದರು.

Translate »