ಹುಲ್ಲಿನ ಮೆದೆಗಳಿಗೆ ಬೆಂಕಿ:  ನಾಲ್ಕು ಲಕ್ಷ ರೂ. ನಷ್ಟ
ಮಂಡ್ಯ

ಹುಲ್ಲಿನ ಮೆದೆಗಳಿಗೆ ಬೆಂಕಿ: ನಾಲ್ಕು ಲಕ್ಷ ರೂ. ನಷ್ಟ

January 15, 2019

ಮಂಡ್ಯ: ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಾಲ್ಕು ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸಿz್ದÉೀಗೌಡ ಎಂಬುವರ ನಾಲ್ಕು ಎಕರೆ, ಗದ್ದೇಗೌಡ ಅವರ ಎರಡು ಎಕರೆ, ಗಿರಿಜಾ ಅವರ ಎರಡು ಎಕರೆ, ಚಿಕ್ಕಯ್ಯ ಅವರ ಎರಡೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಗ್ರಾಮದ ಹೊರಭಾಗದಲ್ಲಿ ಇವರುಗಳು ಹುಲ್ಲಿನ ಮೆದೆಗಳನ್ನು ಅಕ್ಕಪಕ್ಕದಲ್ಲಿ ಹಾಕಿದ್ದರು. ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದಿದ್ದು, ನಾಲ್ವರಿಗೆ ಸೇರಿದ ಹುಲ್ಲಿನ ಮೆದೆಗಳು ಸುಟ್ಟು ಹೋಗಿವೆ.

ಹುಲ್ಲಿನ ಮೆದೆಗಳಿಗೆ ಬೆಂಕಿ ಬಿದ್ದ ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಆ ವೇಳೆಗೆ ಹುಲ್ಲಿನ ಮೆದೆಗಳು ಸಂಪೂರ್ಣ ಸುಟ್ಟು ಹೋಗಿದ್ದವು. ಘಟನೆಯಿಂದ ನಷ್ಟ ಉಂಟಾಗಿರುವ ರೈತರು ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಸುಗಳ ಮೇವಿಗಾಗಿ ಸಂಗ್ರಹಿಸಿಟ್ಟಿದ್ದ ಹುಲ್ಲಿನ ಮೆದೆಗಳು ಬೆಂಕಿಗೆ ಆಹುತಿಯಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Translate »