ಬೆಂಗಳೂರು, ಮಾ.16- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಸೋಮವಾರ ರಾತ್ರಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸಚಿವರು ಮತ್ತು ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಈಶ್ವರಪ್ಪ ಅವರಿದ್ದ ಎಸಿ ಕೊಠಡಿಯಲ್ಲಿ ಇಂದು ರಾತ್ರಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅವರ ನಿವಾಸದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದರು. ಈ ವೇಳೆ ಈಶ್ವರಪ್ಪ ಮತ್ತು ಅವರ ಪತ್ನಿ ಸರ್ಕಾರಿ ನಿವಾಸದಲ್ಲೇ ಇದ್ದರಾದರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.