ವಾಯುಮಾಲಿನ್ಯವಿರುವ ನಗರಗಳಲ್ಲಿ ಪಟಾಕಿ ಮಾರಾಟ, ಬಳಕೆ ನಿಷಿದ್ಧ
ಮೈಸೂರು

ವಾಯುಮಾಲಿನ್ಯವಿರುವ ನಗರಗಳಲ್ಲಿ ಪಟಾಕಿ ಮಾರಾಟ, ಬಳಕೆ ನಿಷಿದ್ಧ

November 10, 2020

ಬೆಂಗಳೂರು, ನ.9(ಕೆಎಂಶಿ)- ನವೆಂ ಬರ್ ಅಂತ್ಯದವರೆಗೂ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇ ಧಿಸುವಂತೆ ಹಸಿರು ನ್ಯಾಯಮಂಡಳಿ ಆದೇಶಿಸಿದೆ. ಕಳೆದ ವರ್ಷ ನವೆಂಬರ್ ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮತ್ತು ವಾಯುಮಾಲಿನ್ಯ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಈ ಆದೇಶ ಅನ್ವಯವಾಗಲಿದೆ.

ಗಾಳಿಯ ಮಟ್ಟವು ಮಧ್ಯಮ ಮತ್ತು ಸಾಮಾನ್ಯವಾಗಿರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮತ್ತು ಬಳಸಲು ಅವಕಾಶ ಮಾಡಿಕೊಟ್ಟಿದೆ. ದೀಪಾವಳಿ, ಕ್ರಿಸ್‍ಮಸ್ ಹಾಗೂ ಹೊಸ ವರ್ಷಾ ಚರಣೆ ಸಂದರ್ಭದಲ್ಲಿ ಇಂತಹ ಪ್ರದೇಶ ಗಳಲ್ಲಿ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸುಡುವುದಕ್ಕೆ ಅವಕಾಶ ನೀಡಿದೆ.

ಕೋವಿಡ್-19 ನಿಯಂತ್ರಿಸುವ ನಿಟ್ಟಿ ನಲ್ಲಿ ವಾಯುಮಾಲಿನ್ಯ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕ್ರಮ ಜರು ಗಿಸಬೇಕೆಂದು ಆದೇಶಿಸಿದೆ. ಹಸಿರು ನ್ಯಾಯಮಂಡಳಿ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಮರು ಆದೇಶ ಹೊರ ಡಿಸಬೇಕಾಗುತ್ತದೆ. ಪರಿಸರ ಇಲಾಖೆ ನೀಡುವ ವರದಿಯನ್ನಾಧರಿಸಿ, ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಈಗಾಗಲೇ ಮುಖ್ಯ ಕಾರ್ಯದರ್ಶಿಯವರು ಕೋವಿಡ್ -19 ಹಿನ್ನೆಲೆಯಲ್ಲಿ ವಾಯುಮಾಲಿನ್ಯ ಕಾಪಾಡುವ ಉದ್ದೇಶದಿಂದ ಹಸಿರು ಪಟಾಕಿ ಮಾರಾಟ ಮತ್ತು ಸಿಡಿಸಲು ಅವಕಾಶ ಮಾಡಿಕೊಟ್ಟಿದ್ದರು.

 

 

Translate »