ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್
ಮೈಸೂರು

ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್

April 25, 2020

ಬೆಂಗಳೂರು,ಏ.24- ಶನಿವಾರ (ಏ.25) ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ರೋಗಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಸಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ತಿಳಿಸಿದ್ದಾರೆ. ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತಿದ್ದು ಇದಕ್ಕಾಗಿ ಪ್ಲಾಸ್ಮಾ ನೀಡಲು ದಾನಿಯೂ ಸಿಕ್ಕಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಸಚಿವ ಶ್ರೀರಾಮುಲು ಶುಕ್ರವಾರ ಕೇಂದ್ರ ಆರೋಗ್ಯ ಸಚಿವರೊಂದಿಗಿನ ವೀಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಈ ಮಾಹಿತಿ ನೀಡಿದ್ದಾರೆ. ಕೋವಿಡ್ ಸೋಂಕಿತರಿಗೆ ಕಾನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿಯನ್ನು ಬಳಸುವ ಮೊದಲ ಹಂತದ ಪ್ರಯೋಗಗಳನ್ನು ಪ್ರಾರಂಭಿಸಲು ಕರ್ನಾಟಕ ಸಿದ್ದವಾಗಿದೆ. ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಯೋಜನೆಗೆ ಚಾಲನೆ ಸಿಕ್ಕಲಿದೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Translate »