ನಾಳೆಯಿಂದ ಫಲಪುಷ್ಪ ಪ್ರದರ್ಶನ
ಹಾಸನ

ನಾಳೆಯಿಂದ ಫಲಪುಷ್ಪ ಪ್ರದರ್ಶನ

January 25, 2019

ಹಾಸನ: ತೋಟಗಾರಿಕೆ ಇಲಾಖೆ, ಹೇಮಾವತಿ ತೋಟಗಾರಿಕೆ ಸಂಘ ಹಾಗೂ ಆತ್ಮ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನವನ್ನು ಜ.26 ರಿಂದ 28ರವರೆಗೆ ನಗರದ ಸಿಲ್ವರ್ ಜ್ಯೂಬ್ಲಿ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಫಲಪುಷ್ಪ ಪ್ರದರ್ಶನದ ಉದ್ಘಾಟನೆ ನೆರವೇರಿಸಲಿದ್ದು, ಮಾಜಿ ಪ್ರಧಾನ ಮಂತ್ರಿ ಹಾಗೂ ಹಾಲಿ ಲೋಕಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರು ಗೌರವಾ ನ್ವಿತ ಉಪಸ್ಥಿತಿ ವಹಿಸಲಿರುವರು. ಶಾಸಕ ಪ್ರೀತಮ್ ಜೆ.ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುಷ್ಪ ಕಲಾಕೃತಿಗಳ ಹಾಗೂ ಪ್ರದರ್ಶನ ಮಳಿಗೆಗಳನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತ ದೇವರಾಜು ಉದ್ಘಾಟಿಸಲಿದ್ದಾರೆ.
ಶಾಸಕರುಗಳಾದ ಹೆಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಕೆ.ಎಸ್.ಲಿಂಗೇಶ್, ವಿಧಾನ ಪರಿಷತ್ ಸದಸ್ಯರುಗಳಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇ ಗೌಡ, ಎಂ.ಎ.ಗೋಪಾಲಸ್ವಾಮಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಟಿ.ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್‍ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಪಿ.ಪುಟ್ಟಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.

Translate »