ಮೈಸೂರು: ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಶುಕ್ರವಾರ ಕಲಾಮಂದಿರದ ಮನೆಯಂಗಳದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಜ್ಯೋತಿ ಮತ್ತು ಅಪರ ಜಿಲ್ಲಾಧಿಕಾರಿ ಅನುರಾಧ.ಜಿ ರವರು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಶುಭಾಶಯ ಕೋರಿದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಜ್ಯೋತಿ ಸರ್ಕಾರದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸುತ್ತಿರುವುದು ಸಂತಸದ ಸಂಗತಿ. ಮಲ್ಲಮ್ಮ ಅವರು ಮಹಿಳೆಯರಿಗೆ ಮಾದರಿ ಯಾಗಿದ್ದರು. ಅವರ ಜೀವನವೇ ಸಮಾಜಕ್ಕೆ ಅವರು ನೀಡಿದ ದೊಡ್ಡ ಸಂದೇಶ ವಾಗಿದೆ. ಸಂಸಾರದಲ್ಲಿ ಎಷ್ಟೇ ಕಷ್ಟ ಬಂದರೂ ಯಾವುದಕ್ಕೂ ಅಂಜದೆ ಆಧ್ಯಾತ್ಮದ ಕಡೆ ಹೆಚ್ಚು ಒಲವು ತೋರಿಸಿ ತನ್ನ ಸುತ್ತ ಮುತ್ತಲಿನವರನ್ನು ಸಹಾ ಆಧ್ಯಾತ್ಮದೆಡೆಗೆ ಸೆಳೆದರು. ಇಂತಹ ಮಹಿಳೆಯರ ಜಯಂತಿ ಎಲ್ಲಾ ಜನತೆಗೂ ತಲುಪಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಾಜು.ಆರ್, ಕನ್ನಡ ಪರ ಚಳುಚಳಿ ನಾಯಕರಾದ ತಾಯೂರು ವಿಠ್ಠಲಮೂರ್ತಿ, ಎಂ.ಬಿ.ವಿಶ್ವನಾಥ್ ಹಾಗೂ ಇತರೆ ಮಹಿಳಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.