ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್, ಸೀರೆ ವಿತರಣೆ
ಮಂಡ್ಯ

ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್, ಸೀರೆ ವಿತರಣೆ

April 20, 2020

ಪಾಂಡವಪುರ, ಏ.19- ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಹಾಗೂ ಕಿರಿಯ ಆರೋಗ್ಯ ಸಹಾಯಕಿಯರಿಗೆ (ಎಎನ್‍ಎಂ) ಶಾಸಕ ಸಿ.ಎಸ್.ಪುಟ್ಟರಾಜು ಆಹಾರ ಕಿಟ್ ಹಾಗೂ ಸೀರೆ ವಿತರಿಸಿದರು.

ತಾಲೂಕಿನ ಚಿನಕುರಳಿ ಸಮುದಾಯ ಆರೋಗ್ಯ ಕೇಂದ್ರ, ನಾರಾಯಣಪುರ, ಮೇಲುಕೋಟೆ, ಬೆಳ್ಳಾಳೆ ಹಾಗೂ ಕೆರೆ ತೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೆ ತೆರಳಿದ ಶಾಸಕರು, ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ಹಾಗೂ ಕಿರಿಯ ಆರೋಗ್ಯ ಸಹಾಯಕಿ ಯರಿಗೆ ಆಹಾರ ಕಿಟ್ ಹಾಗೂ ಸೀರೆ ವಿತರಿಸಿದರು.

ಬಳಿಕ ಮಾತನಾಡಿದ ಶಾಸಕ ಸಿ.ಎಸ್. ಪುಟ್ಟರಾಜು, ಕೊರೊನಾ ನಿಯಂತ್ರಿಸಲು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರಿಗೆ ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರು ಹಾಗೂ ಎಎನ್‍ಎಂಗಳು ಯಾವುದೇ ರೀತಿಯ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತನ್ನಿ, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು. ಸಾರ್ವಜ ನಿಕರು ಕೊರೊನಾ ಬಗ್ಗೆ ಜಾಗೃತರಾಗಿ ಲಾಕ್‍ಡೌನ್‍ನನ್ನು ಪಾಲಿಸಿ ಮನೆಯೊಳ ಗಿದ್ದು ತಮ್ಮ ಆರೋಗ್ಯ ರಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ವೇಳೆ ಎಸಿ ವಿ.ಆರ್.ಶೈಲಜಾ, ತಹಶೀ ಲ್ದಾರ್ ಪ್ರಮೋದ್ ಎಲ್. ಪಾಟೀಲ್, ತಾಪಂ ಇಓ ಆರ್.ಪಿ.ಮಹೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಪಿಡಿಓ ನಾರಾಯಣ್ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

Translate »