ಮನುಷ್ಯನ ಬುದ್ಧಿಶಕ್ತಿ ಸಮರ್ಥ ಬಳಕೆಗೆ ಬೆಂಗಳೂರಲ್ಲಿ ಪೂರಕ ವಾತಾವರಣವಿದೆ

ಬೆಂಗಳೂರು, ನ.17(ಕೆಎಂಶಿ) -ಮನುಷ್ಯನ ಮೇಧಾ ಶಕ್ತಿಯ ಸಮರ್ಥ ಬಳಕೆಗೆ ಪೂರಕ ವಾತಾವರಣ ಬೆಂಗ ಳೂರಿನಲ್ಲಿದೆ, ಕರ್ನಾಟಕ ರಾಜ್ಯದಲ್ಲಿದೆ. ಆದ್ದರಿಂದ ನಾವೀ ನ್ಯತೆಯನ್ನು ಅನ್ವೇಷಿಸಿ, ಸಾಧನೆಯ ಉತ್ತುಂಗಕ್ಕೇರುವಂತೆ ತಂತ್ರಜ್ಞಾನ ಕ್ಷೇತ್ರದ ಭಾಗೀದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತವಾಗಿ ಕರೆ ನೀಡಿದರು.

ಬುಧವಾರ ಬೆಂಗಳೂರು ಟೆಕ್ ಸಮ್ಮಿಟ್ ಕಾರ್ಯ ಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದಲ್ಲಿ ಕರ್ನಾಟಕ ಮುಂಚೂಣಿ ಯಲ್ಲಿರುವ ರಾಜ್ಯ, ತಂತ್ರಜ್ಞಾನಕ್ಕೆ ಸಂಬಂಧಿಸಿದ ಅನೇಕ ನಾಯಕರಿದ್ದಾರೆ. ಕಿರಣ್ ಮಜುಂದಾರ್ ಷಾ ಸೇರಿ ದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧಕರು, ಪ್ರತಿಭಾವಂತರಿದ್ದಾರೆ. ಅಂತರರಾಷ್ಟ್ರೀಯ ಖ್ಯಾತಿಯುಳ್ಳ 300ಕ್ಕೂ ಹೆಚ್ಚು ಸಂಶೋ ಧನಾ ಮತ್ತು ಅಭಿವೃದ್ಧಿ ಸಂಸ್ಥೆಗಳಿವೆ. ಏರೋಸ್ಪೇಸ್, ರಕ್ಷಣಾ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್,  ನವೀಕರಿಸಬಹುದಾದ ಇಂಧನ, ಐ.ಟಿ-ಬಿ.ಟಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದರು.

ಬೆಂಗಳೂರು ಟೆಕ್ ಸಮ್ಮಿಟ್ ಹಿಂದಿನಿಂದಲೂ ಯಶಸ್ವಿ ಸಮಾವೇಶವಾಗಿದ್ದು, ಈ ಬಾರಿಯ ಸಮಾವೇಶ ಇನ್ನಷ್ಟು ಫಲಪ್ರದವಾಗಬೇಕು. ತಂತ್ರಜ್ಞಾನ ಕ್ಷೇತ್ರದ ಮುನ್ನಡೆ ಯಲ್ಲಿ ಪ್ರತಿಯೊಬ್ಬರಿಗೂ ಹಾಗೂ ಸಂಪೂರ್ಣ ವ್ಯವಸ್ಥೆಗೆ ತಂತ್ರಜ್ಞಾನ ತಲುಪಿಸುವಲ್ಲಿ ಈ ಸಮಾವೇಶದಿಂದ ನಿಖರ ಹಾಗೂ ಜವಾಬ್ದಾರಿಯುತ ಕೊಡುಗೆ ದೊರೆಯುವುದು ಎಂಬ ಆಶಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಯಶಸ್ಸು  ಸಾಧನೆಯ ಭಾಗವಾಗಿದ್ದು, ದೇಶ ಹಾಗೂ ವಿಶ್ವದ ಏಳಿಗೆಗೆ ಹಾಗೂ ಅಂತಿಮವಾಗಿ ಮನುಕುಲದ ಒಳಿತಿಗೆ ಕಾರಣವಾಗಬಲ್ಲದು. ಎಲ್ಲ ದೇಶಗಳ ಪ್ರತಿನಿಧಿ ಗಳು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಹೂಡಿಕೆ ಮಾಡಿ, ಯಶಸ್ಸು ಗಳಿಸಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ನಾವೀನ್ಯತೆ ಸರಸ್ವತಿಯಂತೆ, ಬೆಂಗ ಳೂರು ಸರಸ್ವತಿಯ ವಾಹನ ಹಂಸದಂತೆ, ಹಂಸ ಭಾರಿ ಗಾತ್ರ, ತೂಕದ ಪಕ್ಷಿಯಾಗಿದ್ದರೂ, ಅತಿ ಎತ್ತರಕ್ಕೆ ಏರಬಲ್ಲ ಪಕ್ಷಿಯಾಗಿದೆ. ಅಂತೆಯೇ ಬೆಂಗಳೂರು ನಾವೀನ್ಯತೆಯನ್ನು ಅತೀ ಎತ್ತರಕ್ಕೆ ಕೊಂಡೊಯ್ಯಬಲ್ಲದು ಎಂದರು. ಪ್ರಧಾನಮಂತ್ರಿಗಳ ಆತ್ಮ ನಿರ್ಭರ ಭಾರತ ಕಾರ್ಯಕ್ರಮವನ್ನು ಅಕ್ಷರಶಃ ನಿಜ ಮಾಡಲು ಕರ್ನಾಟಕ ಸಿದ್ಧವಾಗಿದೆ ಎಂದರು. ಪ್ರಧಾನಿಯವರು ಸದಾ ದೇಶದ ಭವಿಷ್ಯದ ಕುರಿತು ಚಿಂತನೆ ನಡೆಸುತ್ತಿದ್ದು, ನವಕರ್ನಾಟಕ ದಿಂದ ನವಭಾರತ ನಿರ್ಮಾಣ ನಮ್ಮ ಧ್ಯೇಯವಾಗಿದೆ ಎಂದರು. ವಿಶ್ವ ನಾಗರಿಕತೆಯ ಪರಿಕಲ್ಪನೆ ಇಂದಿನ ಮಂತ್ರ. ಮನುಷ್ಯ ವಿಕಾಸಗೊಂಡಂತೆ, ತಂತ್ರಜ್ಞಾನವೂ ವಿಕಾಸ ಗೊಂಡಿವೆ. ಮಾನವನ ಮೆದುಳಿನ ಶಕ್ತಿಯಿಂದ ಮನು ಕುಲದ ಚರಿತ್ರೆಯಲ್ಲಿ ಅದ್ಭುತ ನಾವೀನ್ಯತೆ ಸಾಧಿಸಲಾಗಿದೆ. ತಾಂತ್ರಿಕತೆಯಲ್ಲಿನ ನಾವೀನ್ಯತೆಗಳನ್ನು ಸಂಸ್ಥೆಗಳಿಗಿಂತಲೂ ಕೆಲವೇ ವ್ಯಕ್ತಿಗಳು ಹೆಚ್ಚಾಗಿ ಮಾಡಿದ್ದಾರೆ. ಆದ್ದರಿಂದ ಮಾನವನ ಬುದ್ಧಿಶಕ್ತಿ ಗುರುತಿಸಿ, ಗೌರವಿಸಬೇಕು ಎಂದರು.