ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ  ಉದ್ಯೋಗ ಕಲ್ಪಿಸಲಿದೆ `ಫ್ಯೂಚರ್ ಡಿಜಿಟಲ್ ಜಾಬ್ಸ್’
News

ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಿದೆ `ಫ್ಯೂಚರ್ ಡಿಜಿಟಲ್ ಜಾಬ್ಸ್’

January 14, 2022

ಬೆಂಗಳೂರು, ಜ.13(ಕೆಎಂಶಿ)- ಸರ ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾ ವಕಾಶ ಕಲ್ಪಿಸಿಕೊಡುವ ಮಹತ್ವಾ ಕಾಂಕ್ಷೆಯುಳ್ಳ `ಫ್ಯೂಚರ್ ಡಿಜಿಟಲ್ ಜಾಬ್ಸ್’ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಚಾಲನೆ ನೀಡಿದರು.

ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಂಸ್ಥೆಗಳು ಒಡಂಬಡಿಕೆಗೆ ಸಹಿ ಹಾಕಿದವು. ವಿಧಾನಸೌಧದಲ್ಲಿ `ಫ್ಯೂಚರ್ ಡಿಜಿಟಲ್ ಜಾಬ್ಸ್’ ಉಪಕ್ರಮಕ್ಕೆ ಹಸಿರು ನಿಶಾನೆ ತೋರಿದ ಸಚಿವರು, ಈ ಕಾರ್ಯಕ್ರಮದಿಂದ ರಾಜ್ಯದ 92 ಸರಕಾರಿ ಪಾಲಿಟೆಕ್ನಿಕ್ ಮತ್ತು 14 ಸರಕಾರಿ ಎಂಜಿ ನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಅವರ ಕನ ಸಿನ ಉದ್ಯೋಗ ಸಿಗಲಿದೆ. ಇನ್ನೊಂದೆಡೆ ಯಲ್ಲಿ, ಉದ್ಯಮರಂಗಕ್ಕೆ ಬೇಕಾದ ಸ್ವರೂಪ ದಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗು ವುದು. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿದೆ ಎಂದರು.

ಈ ನೂತನ ಕಾರ್ಯಕ್ರಮದ ಅನ್ವಯ ಸರಕಾರಿ ಎಂಜಿನಿಯರಿಂಗ್ ಮತ್ತು ಪಾಲಿ ಟೆಕ್ನಿಕ್ ಸಂಸ್ಥೆಗಳಲ್ಲಿ `ಫ್ಯೂಚರ್ ಡಿಜಿಟಲ್ ಜಾಬ್ಸ್’ ಯೋಜನೆಯನ್ನು ಒಂದು ವಿಶೇಷ ಅಭಿಯಾನದಂತೆ ಹಮ್ಮಿಕೊಳ್ಳಲಾಗುವುದು. ಜೊತೆಗೆ ಅರ್ಥಪೂರ್ಣ ಇಂಟರ್ನ್ ಶಿಪ್, ಪ್ರಾಜೆಕ್ಟುಗಳು ಮತ್ತು ಉದ್ಯೋಗ ನೇಮ ಕಾತಿ ಕನಸು ನನಸಾಗುವಂತೆ ವೃತ್ತಿ ಸಮಾ ಲೋಚನೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು ಎಂದು ಹೇಳಿದರು.
ಸರಕಾರಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪರಿಪೋಷಣೆ ಮತ್ತು ಉತ್ಕೃಷ್ಟತಾ ಕೇಂದ್ರ ಗಳನ್ನು ಸ್ಥಾಪಿಸಲಾಗುವುದು. ಉದ್ಯಮ ಗಳೊಂದಿಗೆ ಸೇರಿಕೊಂಡು ತಾಂತ್ರಿಕ ಶಿಕ್ಷಣದ ಪಠ್ಯಕ್ರಮವನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸಿ, ಬೋಧನಾ ಮೂಲ ಸೌಕರ್ಯ ಹೆಚ್ಚಿಸಲಾಗುವುದು ಎಂದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕೆಡಿಇಎಂ ನಡುವಿನ ಒಡಂ ಬಡಿಕೆಯು ಬೆಂಗಳೂರಿನಿಂದ ಹೊರಗಿ ರುವ ಕೈಗಾರಿಕೋದ್ಯಮಗಳಲ್ಲಿ ವಿದ್ಯಾರ್ಥಿ ಗಳು ಅಲ್ಲಿರುವ ಉದ್ಯೋಗಗಳನ್ನು ಕುರಿತು ಸಂಶೋಧನೆ ನಡೆಸಲು ಅನುವು ಮಾಡಿ ಕೊಡಲಿದೆ. ಜತೆಗೆ ಉದ್ಯಮಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ಒದಗಿಸಲಿದ್ದು, ನಿಯಮಿತವಾಗಿ ವಿಚಾರ ಸಂಕಿರಣ ಗಳನ್ನು ಕೂಡ ಆಯೋಜಿಸಲಾಗುವುದು. ಇದರಿಂದ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದರು.

ಕೆಡಿಇಎಂ ಸಿಇಒ ಸಂಜೀವ್ ಗುಪ್ತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಒಪ್ಪಂದಕ್ಕೆ ಸಹಿ ಹಾಕಿದರು.
ಟ್ಯಾಲೆನ್ಷಿಯಾ ಗ್ಲೋಬಲ್ ಕಂಪನಿಯ ಸಿಇಒ ಎಸ್.ಸುಬ್ರಹ್ಮಣಿಯನ್ ಮಾತ ನಾಡಿ, ಇದೊಂದು ಹೊಸ ಪ್ರಯತ್ನವಾಗಿದ್ದು ಇದರಿಂದ ಮಕ್ಕಳಿಗೆ ಅನುಕೂಲ ಆಗಲಿದೆ. ಸಾವಿರಕ್ಕೂ ಹೆಚ್ವು ಮಂದಿಗೆ ಈ ವರ್ಷ ಉದ್ಯೋಗ ಸಿಗುವ ಹಾಗೆ ಮಾಡಲಾಗು ವುದು. ಮುಂದಿನ ದಿನಗಳಲ್ಲಿ ಹತ್ತು ಸಾವಿ ರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಗುವ ಹಾಗೆ ಮಾಡಲಾಗುವುದು ಎಂದರು.

Translate »