ಪರಿಸರ ಉಳಿವಿಗೆ ಗಿಡ, ಮರ ಬೆಳೆಸಿ

ಗುಂಡ್ಲುಪೇಟೆ:- ‘ಪ್ರಸ್ತುತ ದಿನಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಪರಿಸರವನ್ನು ಉಳಿಸಬೇಕಾದರೆ ಹೆಚ್ಚು ಗಿಡ-ಮರಗಳನ್ನು ಬೆಳಸಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶಿವಪ್ರಸಾದ್ ಹೇಳಿದರು.

ತಾಲೂಕಿನ ಶಿವಪುರ ಗ್ರಾಮದ ಜೆಎಸ್‍ಎಸ್ ಪ್ರೌಢಶಾಲೆಯಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕ ಜೀವನ ಶೈಲಿಯೊಂದಿಗೆ ಪರಿಸರ ಅವನತಿಯ ಅಂಚಿಗೆ ಬಂದಿದೆ. ಇಂದಿನ ಮಕ್ಕಳು ಪರಿಸರವನ್ನು ಉಳಿಸುವುದು ಅನಿವಾರ್ಯವಾಗಿದೆ. ಪರಿಸರ ದಿನಾಚರಣೆಯಲ್ಲಿ ಮಾತ್ರ ಗಿಡ ನೆಡುವುದನ್ನು ಬಿಟ್ಟು, ಸದಾ ಕಾಲ ಪರಿಸರದ ಕಾಳಜಿ ಹೊಂದಬೇಕು ಎಂದು ಸಲಹೆ ನಿಡಿದರು.

ವಿದ್ಯಾರ್ಥಿಗಳು ತಮ್ಮ ಬಡಾವಣೆಯ ರಸ್ತೆ ಪಕ್ಕದಲ್ಲಿ, ಮನೆಯ ಅಕ್ಕ-ಪಕ್ಕದಲ್ಲಿ ಗಿಡಗಳನ್ನು ನೆಟ್ಟು ಪೆÇೀಷಿಸಬೇಕು. ಪ್ರಸ್ತುತ ದಿನಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಪರಿಸರವನ್ನು ಉಳಿಸಬೇಕಾದರೆ ಹೆಚ್ಚು ಗಿಡ-ಮರಗಳುಗಳನ್ನು ಬೆಳಸಬೇಕು ಎಂದರು.

ಕಾಡನ್ನು ಬೆಳಸಿ ನಾಡು ಉಳಿಸಿ. ಕಾಡು ಬೆಳೆದರೆ ಉತ್ತಮವಾದ ಮಳೆ ಬೆಳೆಯಾಗುತ್ತದೆ. ಇದರಿಂದ ಪ್ರತಿಯೊಬ್ಬರೂ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ದೊಡ್ಡಮ್ಮ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಗಿಡ, ಮರಗಳನ್ನು ಹೆಚ್ಚು ಬೆಳೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಸುಬ್ಬಪ್ಪ, ಪ್ರಸಾದ್, ಹಾಲಿನ ಡೇರಿ ಅಧ್ಯಕ್ಷ ಶಶಿಧರ್, ಶಿಕ್ಷಕ ಸಿ.ಎಚ್.ಲೋಕೇಶ್, ಮೇಲ್ವಿಚಾರಕರಾದ ರಾಣ , ಮಹೇಶ್ವರಪ್ಪ ಸೇರಿದಂತೆ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು ಇದ್ದರು ಹಾಜರಿದ್ದರು.

ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಜೆಎಸ್‍ಎಸ್ ಪ್ರೌಢಶಾಲೆಯಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಿವಪ್ರಸಾದ್ ಉದ್ಘಾಟಿಸಿದರು.