ಎಸ್‍ಐಟಿ ತನಿಖಾ ವೈಖರಿಗೆ  ಸಿಡಿ ಲೇಡಿ ಅಸಮಾಧಾನ
News

ಎಸ್‍ಐಟಿ ತನಿಖಾ ವೈಖರಿಗೆ ಸಿಡಿ ಲೇಡಿ ಅಸಮಾಧಾನ

April 5, 2021

ಬೆಂಗಳೂರು, ಏ.4-ಸಿಡಿ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳಿಂದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಭಾನುವಾರ ಪತ್ರ ರವಾನಿಸಿದ್ದಾರೆ.

ಯುವತಿ ತನ್ನ ಕೈಬರಹದಲ್ಲೇ ಬರೆದಿರುವ ಪತ್ರವನ್ನು ಆಕೆಯ ಪರ ವಕೀಲ ಜಗದೀಶ್‍ಕುಮಾರ್ ಮತ್ತು ವಕೀ ಲರೂ ಆಗಿರುವ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ ರಾಜ್ ಅವರು ಪೊಲೀಸ್ ಆಯುಕ್ತರ ಕಚೇರಿಗೆ ತಲುಪಿಸಿದರು.
ಎಸ್‍ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ. ನನಗೆ ಪ್ರತೀ ಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿರುವ ಅಧಿಕಾರಿಗಳು, ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆ ಮಾಡದೆ ರಾಜಾರೋಷವಾಗಿ ಓಡಾಡಲು ಬಿಟ್ಟಿದ್ದಾರೆ. ಈ ಪ್ರಕರಣದಲ್ಲಿ ಸ್ವತಃ ಎಸ್‍ಐಟಿ ಅಧಿಕಾರಿಗಳೇ ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ. ಹೀಗೇ ಆದರೆ ನನಗೆ ನ್ಯಾಯ ಸಿಗುವುದಾದರೂ ಹೇಗೆ? ಎಂದು ಪ್ರಶ್ನಿಸಿರುವ ಆಕೆ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯಾಗಿದ್ದೇನೆ. ನನಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂತ್ರಸ್ತ ಯುವತಿಯ ಪತ್ರದ ಪೂರ್ಣ ಪಾಠ
ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ
ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(ಎ), 506, 504, 376(ಸಿ), 417 ಹಾಗೂ Iಖಿ ಂಛಿಣ 67(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೆÇಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೆÇಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್‍ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು. ಅಲ್ಲಿ ಅವರೊಂದಿಗೆ ಎಸ್‍ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಿಗ್ಗೆ ಸ್ಥಳ ಪಂಚನಾಮೆ ಪ್ರಕ್ರಿಯೆ ನನ್ನ ಆರ್‍ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್‍ಮೆಂಟ್‍ಗೆ ಕರೆದೊಯ್ಯಲಾಯಿತು. ಇದೆಲ್ಲಾ ಆದ ನಂತರ 2-4-2021ರಂದು ನನ್ನ 161 ಹೇಳಿಕೆಯ ಮುಂದುವರೆದ ವಿಚಾರಗಳನ್ನು ದಾಖಲಿಸಿ ಕೊಳ್ಳಲಾಯಿತು. ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂ ದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್‍ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂ ತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ.

ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗ ದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ. ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೆÇೀಲಕಲ್ಪಿತ ವಿಚಾರಗಳನ್ನು ಮಾಧ್ಯಮ ಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರು ವುದು ಎದ್ದು ಕಾಣುತ್ತಿದೆ. ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್‍ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ.
ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆ ಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡ ಲಾಗುತ್ತಿದೆ. ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕ ರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತ ವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ.

Translate »