ವಿಲಕ್ಷಣ ವ್ಯಕ್ತಿತ್ವದವರಿಗೆ  ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಬಾರದು
News

ವಿಲಕ್ಷಣ ವ್ಯಕ್ತಿತ್ವದವರಿಗೆ ಪಠ್ಯ ಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡಬಾರದು

June 28, 2022

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಗಳಿಗೆ ವಿಲಕ್ಷಣ ವ್ಯಕ್ತಿತ್ವದವರನ್ನು ನೇಮಿಸಬಾರದು. ಅಂತಹ ಸಮಿತಿಗಳಿಗೆ ನೇಮಕ ಮಾಡುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಪಟ್ಟ ನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಹೇಳಿದರು.
ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಸ್ವಾಮೀಜಿ, ರೋಹಿತ್ ಚಕ್ರ ತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರನ್ನಾಗಿ ನೇಮಕ ಮಾಡಿದ್ದನ್ನು ವಿರೋಧಿಸಿದರು. ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸರ್ಕಾರ ರೂಪಿಸಿದ ಪಠ್ಯವನ್ನು ಓದಿ, ಕಲಿತು, ಪರೀಕ್ಷೆ ಬರೆಯಬೇಕು. ಅಂತಹ ಪಠ್ಯ ರೂಪಿಸುವವರು ಎಡ, ಬಲ ಅಥವಾ ಇನ್ನಿತರ ಸಿದ್ಧಾಂತದ ಹಿಂಬಾಲಕರು ಆಗಿರಬಾರದು. ಸಮಚಿತ್ತದಿಂದ ಎಲ್ಲವನ್ನೂ ನೋಡುವ ಪ್ರಾಜ್ಞ ರಾಗಿರಬೇಕು. ಆಳವಾದ ಅಧ್ಯಯನಶೀಲತೆ ಹೊಂದಿದ ವ್ಯಕ್ತಿಗಳನ್ನು ಪಠ್ಯಕ್ರಮ ರೂಪಿಸಲು ನೇಮಿಸಬೇಕು. ಪವಿತ್ರವಾದ ನಾಡ ಬಾವುಟವನ್ನು ಯಾವುದೋ ಒಂದು ವಸ್ತುವಿಗೆ (ಚಡ್ಡಿ) ಹೋಲಿಸಿದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಷ್ಕರಣೆಗೆ ನೇಮಿಸಿದ್ದು ಸರಿಯಲ್ಲ ಎಂದು ಹೇಳಿದರು.

ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಮುಂತಾದ ಮಹನೀ ಯರಿಗೆ ಅವಮಾನ ಹೊಸದೇನೂ ಅಲ್ಲ. ಈಗ ಶಾಲಾ ಪಠ್ಯಪುಸ್ತಕ ಗಳಲ್ಲಿ ಅವಮಾನ ಆಗಿರುವುದಕ್ಕೆ ಹೆಚ್ಚು ವಿರೋಧ ವ್ಯಕ್ತವಾಗಿದೆ. ಲೋಪವನ್ನು ಸರಿಪಡಿಸಿ ಮಹನೀಯರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

Translate »