ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ
News

ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ

July 2, 2021

ಬೆಂಗಳೂರು,ಜು.1-ನೆರೆ ರಾಜ್ಯ ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾ ಣಿಕರಿಗೆ ಕೊರೊನಾ ಆರ್‍ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ 2 ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿ, ಸರ್ಕಾರ ಆದೇಶಿ ಸಿದೆ. ಡೆಲ್ಟಾ ಪ್ಲಸ್ ರೂಪಾಂತರವು ಕೇರಳದ ಕೆಲವು ಜಿಲ್ಲೆಗಳಲ್ಲಿ ವರದಿಯಾಗಿದ್ದು, ರಾಜ್ಯಾದ್ಯಂತ ಜಾರಿ ಯಲ್ಲಿರುವ ಕ್ರಮಗಳ ನಡುವೆ ಗಡಿ ಜಿಲ್ಲೆಗಳಲ್ಲಿ ವಿಶೇಷ ಕಣ್ಗಾವಲು ವಹಿಸಲಾಗಿದೆ. ವಿಮಾನ, ಬಸ್, ರೈಲು, ಟ್ಯಾಕ್ಸಿ ಮತ್ತು ವೈಯಕ್ತಿಕ ಸಾರಿಗೆ ಮೂಲಕ ಕರ್ನಾಟಕವನ್ನು ಪ್ರವೇಶಿಸುವ ಎಲ್ಲಾ ಪ್ರಯಾಣಿಕರು, 72 ಗಂಟೆಯೊಳಗಿನ ಆರ್‍ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ 2 ಡೋಸ್ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು. ಗಡಿ ಜಿಲ್ಲೆಗಳಾದ ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡದ ಮೂಲಕ ರಾಜ್ಯಕ್ಕೆ ಪ್ರವೇ ಶಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಚಾಲಕ, ಸಹಾಯಕ/ಕ್ಲೀನರ್, ಪ್ರಯಾಣಿಕರ ಪರಿಶೀಲನೆಗೆ ಚೆಕ್‍ಪೋಸ್ಟ್‍ಗಳಲ್ಲಿ ಸಿಬ್ಬಂದಿ ನಿಯೋಜಿಸುವಂತೆ ಸೂಚಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವ್ಯವಹಾರ ಇನ್ನಿತರ ಕಾರಣ ಗಳಿಗೆ ನಿತ್ಯ ಸಂಚಸಿರುವವರು ಪ್ರತಿ 15 ದಿನಗಳಿಗೊಮ್ಮೆ ಆರ್‍ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ತರುವುದು ಕಡ್ಡಾಯ. ಸಾಂವಿಧಾನಿಕ ಕಾರ್ಯಕಾರಿಗಳು, ವೈದ್ಯಕೀಯ ಸಿಬ್ಬಂದಿ, 2 ವರ್ಷದೊಳಗಿನ ಮಕ್ಕಳಿಗೆ ವಿನಾಯ್ತಿ ಇದ್ದು, ಕುಟುಂಬದಲ್ಲಿ ಮರಣ ಸಂಭವಿ ಸುವುದು, ಚಿಕಿತ್ಸೆ ಇತ್ಯಾದಿ ತುರ್ತು ಸಂದರ್ಭದಲ್ಲಿ ಪ್ರವೇಶಕ್ಕೆ ಅವಕಾಶ ನೀಡಿ, ಇಲ್ಲಿಯೇ ಸ್ವಾಬ್ ಸಂಗ್ರಹಿಸಿ, ಅಗತ್ಯ ದಾಖಲೆ ಸಂಗ್ರಹಿಸುವಂತೆ ತಿಳಿಸಲಾಗಿದೆ.

Translate »