ಮಡಿಕೇರಿ: ಕೊಡಗಿನ ಜನರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತ್ತೆ ಟಿಪ್ಪು ಜಯಂತಿ ಆಚರಣೆಯನ್ನು ಬಲವಂತವಾಗಿ ಹೇರಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಇನ್ನಾ ದರು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಜಯಂತಿಯನ್ನು ರದ್ದುಗೊಳಿ ಸಬೇಕೆಂದು ಒತ್ತಾಯಿಸಿದ್ದಾರೆ.
ನಗರದಲ್ಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಟಿಪ್ಪು ಜಯಂತಿ ಆಚರಿ ಸುವಂತೆ ಯಾವುದೇ ಮುಸಲ್ಮಾನರು ಬೇಡಿಕೆ ಇಟ್ಟಿಲ್ಲ. ಅಲ್ಲದೆ, ಸುಮಾರು 50 ವರ್ಷ ಗಳ ಕಾಲ ರಾಜ್ಯವನ್ನು ಆಳಿದ ಕಾಂಗ್ರೆಸ್ಸಿಗೂ ಅದರ ನೆನಪು ಬಂದಿರಲಿಲ್ಲ. ಆದರೆ, ಸಿದ್ದ ರಾಮಯ್ಯ ಮುಖ್ಯಮಂತ್ರಿಯಾದ ಸಂದರ್ಭ ಟಿಪ್ಪು ಜಯಂತಿಯನ್ನು ಆಚರಿಸುವ ಮೂಲಕ ಓಟ್ ಬ್ಯಾಂಕ್ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಬಾರದೆಂದು ಮತ್ತೊಮ್ಮೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತು ವಾರಿ ಸಚಿವರಲ್ಲಿ ಮನವಿ ಮಾಡುತ್ತೇವೆ. ಇದನ್ನೂ ಮೀರಿ ಜಯಂತಿ ಆಚರಿಸಲು ಮುಂದಾದರೆ ತೀವ್ರ ಪ್ರತಿಭಟನೆಯ ಮೂಲಕ ತಡೆಯೊಡ್ಡುವುದಾಗಿ ಎಚ್ಚರಿಕೆ ನೀಡಿದರು.
ಟಿಪ್ಪು ಓರ್ವ ಮತಾಂಧ, ಹಿಂದೂ ವಿರೋಧಿ ಮಾತ್ರವಲ್ಲದೆ ಅತ್ಯಾಚಾರಿ ಮತ್ತು ಮತಾಂತರಿಯೂ ಆಗಿದ್ದಾನೆ. ಇದಕ್ಕೆ ಸಾಕಷ್ಟು ಸಾಕ್ಷಿಗಳು ಇತಿಹಾಸದ ಪುಟದಲ್ಲಿದ್ದು, ಇದನ್ನು ರಾಜ್ಯ ಸರ್ಕಾರ ಮನಗಾಣ ಬೇಕಿದೆ. ಕೊಡಗಿಗೆ 31 ಬಾರಿ ದಾಳಿ ನಡೆ ಸಿದ ಟಿಪ್ಪು ಹೀನಾಯವಾಗಿ ಸೋಲು ಕಂಡಿದ್ದು, 32ನೇ ಬಾರಿಗೆ ಕುತಂತ್ರದಿಂದ ಕೊಡವರನ್ನು ಹತ್ಯೆಗೈಯುವ ಮೂಲಕ ಜಯಗಳಿಸಿದ್ದಾನೆ ಎಂದು ಅಪ್ಪಚ್ಚು ರಂಜನ್ ಆರೋಪಿಸಿದರು. ಮತಾಂಧ ವ್ಯಕ್ತಿಯ ಜನ್ಮ ದಿನಾಚರಣೆಯನ್ನು ಆಚರಿ ಸುವುದು ಕೊಡಗಿನ ಜನತೆಗೆ ಸರ್ಕಾರ ಮಾಡುವ ಅಪಮಾನವಾಗಿದ್ದು, ಯಾವುದೇ ಕಾರಣಕ್ಕೂ ಈ ಜನ್ಮ ದಿನಾಚರಣೆ ನಡೆ ಯಲು ಬಿಡುವುದಿಲ್ಲವೆಂದು ಎಚ್ಚರಿಕೆ ನೀಡಿ ದರು. ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಮಾತನಾಡಿ, ದೇವಾಲಯಗಳನ್ನು ಧ್ವಂಸ ಗೊಳಿಸಿದ್ದ ಲ್ಲದೆ ಮಂಗಳೂರಿನಲ್ಲಿ ಕ್ರೈಸ್ತರನ್ನು ಮತಾಂ ತರಗೊಳಿಸಿದ್ದಾನೆ. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಘರ್ಷಣೆಯಲ್ಲಿ ಕುಟ್ಟಪ್ಪ ಸಾವಿಗೀಡಾ ಗಿದ್ದು, ಈ ಸಂದರ್ಭ ಕುಟ್ಟಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್.ಡಿ. ಕುಮಾ ರಸ್ವಾಮಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರಲ್ಲದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಇದನ್ನು ರದ್ದು ಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದೀಗ ಕುಮಾರಸ್ವಾಮಿ ಅವರೇ ಮತ್ತೊಮ್ಮೆ ಟಿಪ್ಪು ಜಯಂತಿಯನ್ನು ಆಚರಿ ಸಲು ಮುಂದಾಗುವ ಮೂಲಕ ನಾಟಕವಾಡು ತ್ತಿದ್ದಾರೆ ಎಂದು ಆರೋಪಿಸಿದರು.