ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್
ಹಾಸನ

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಆನಂದ್

April 9, 2019

ಹಾಸನ: ಪಕ್ಷ ಬಲಪಡಿಸುವ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿಸುವ ದೃಷ್ಟಿ ಯಿಂದ ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿ ಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸೂಚನೆಯಂತೆ ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲಿಸಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ರಾಹುಲ್ ಗಾಂಧಿ ಪ್ರಧಾನಿ ಯಾಗಬೇಕು. ಅದಕ್ಕಾಗಿ ಎಲ್ಲರೂ ಅಭ್ಯರ್ಥಿ ಗಳ ಗೆಲುವಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗಳು ಗೆಲ್ಲಬೇಕು. ಈ ನಿಟ್ಟಿನಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ಮತ್ತು ಮುಖಂಡರು ಜವಾಬ್ದಾರಿ, ಬದ್ಧತೆಯಿಂದ ಶ್ರಮಿಸಬೇಕು. ತಮ್ಮಲ್ಲಿರುವ ಗೊಂದಲಗಳನ್ನು ಬಗೆಹರಿಸಿ ಗೊಂಡು ಅಭ್ಯರ್ಥಿಯ ಗೆಲುವಿಗೆ ಶ್ರಮಿಸ ಬೇಕು ಎಂದು ಸಲಹೆ ನೀಡಿದರು.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡ ಗಿರುವವರ ಬಗ್ಗೆ ಮಾಹಿತಿ ಪಡೆದು ಕಠಿಣ ಕ್ರಮ ತೆಗದುಕೊಳ್ಳಲಾಗುವುದು. ಕಾರ್ಯ ಕರ್ತರ ನೋವುಗಳನ್ನು ಸಹಿಸಿಕೊಂಡು ಹೋಗುವುದು ಕಷ್ಟ. ಆದರೆ, ಮೇಲ್ಮಟ್ಟ ದಲ್ಲಿ ಹೊಂದಾಣಿಕೆ ಮಾಡಿಕೊಂಡಿರುವು ದನ್ನು ಪಾಲಿಸುವುದು ನಮ್ಮ ಕರ್ತವ್ಯ ಎಂದ ಅವರು, ಎಲ್ಲಾ ತಾಲೂಕುಗಳಲ್ಲಿ ಮೈತ್ರಿ ಅಭ್ಯರ್ಥಿಗೆ ಉತ್ತಮ ವಾತಾವರಣವಿದೆ ಎಂದು ತಿಳಿಸಿದರು.

ಹಿರಿಯ ಮುಖಂಡ ಎಚ್.ಎಂ.ವಿಶ್ವನಾಥ್ ಅವರು ಮೈತ್ರಿ ಕೂಟದ ಅಭ್ಯರ್ಥಿ ಕುರಿತು ನೀಡಿರುವ ಹೇಳಿಕೆ ಹೈಕಮಾಂಡ್ ಹಾಗೂ ಮೈತ್ರಿ ಧರ್ಮ ಪಾಲನೆ ವಿರುದ್ಧ ವಾಗಿದೆ. ಈ ಕುರಿತು ಕೆಪಿಸಿಸಿಗೆ ದೂರು ನೀಡಲಾಗುವುದು. ಸಮಿತಿ ನಿರ್ದೇಶನ ದಂತೆ ಕ್ರಮವಹಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಏ. 11ರಂದು ಹಾಸನದಲ್ಲಿ ಎಚ್.ಡಿ. ದೇವೇಗೌಡ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ಪ್ರಚಾರ ಸಭೆಯಲ್ಲಿ ಭಾಗ ವಹಿಸುವರು. ಹಲವು ಕಾಂಗ್ರೆಸ್ ಮುಖಂ ಡರು ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಡಿ.ಸಿ.ಸಣ್ಣಸ್ವಾಮಿ, ನೀಲಕಂಠ, ರಿಝ್ವಾನ್, ರಂಗಸ್ವಾಮಿ ಇದ್ದರು.

Translate »