ಶಿವಮೊಗ್ಗ, ಸೆ.3- ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಬುಧವಾರ ರಾತ್ರಿ ನಿಧನರಾದರು.
ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಅವರು ಚಿಕಿತ್ಸೆ ಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿ ದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೆಗ್ಗಾನ್ ಆಸ್ಪತ್ರೆಯ ಎದುರು ಜನ ಸಾಗರವೇ ನೆರೆದಿತ್ತು. ಸೂಕ್ತ ಸಮಯ ದಲ್ಲಿ ಬೆಡ್ ಸಿಗಲಿಲ್ಲ ಎಂದು ಅನು ಯಾಯಿಗಳು ಆಕ್ರೋಶ ವ್ಯಕ್ತಪಡಿಸಿದರು. ವಿಐಎಸ್‍ಎಲ್ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕ ರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು. ಮಾಜಿ ಶಾಸಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಜಮಾಯಿಸಿದ್ದರು.