ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮೈಸೂರು

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

March 31, 2022

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ೧೪೦ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ
ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಅಂತಹ ಯಾವುದೇ ಬದಲಾವಣೆಗಳೂ ಇಲ್ಲ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿ ಯುತ್ತಾರೆ. ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಬೊಮ್ಮಾಯಿ ಅವರೇ ಪಕ್ಷವನ್ನು ಮುನ್ನ ಡೆಸಲಿದ್ದು, ಈ ಬಗ್ಗೆ ಅನುಮಾನಪಡುವ ಅಗತ್ಯ ವಿಲ್ಲ. ನಾಯಕತ್ವ ಬದಲಾವಣೆ ಎಲ್ಲಾ ಊಹಾ ಪೋಹಗಳು ಆಧಾರರಹಿತವಾಗಿದ್ದು, ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
ಮೈಸೂರು, ಮಾ.೩೦ (ಆರ್‌ಕೆಬಿ)- ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ೧೪೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಹಾಗೂ ಬಿಜೆಪಿ ಪರವಾದ ಅಲೆ ಇದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಬಗ್ಗೆ ಜನರಿಗೆ ಬೇಸರವಾಗಿದೆ. ಹಾಗಾಗಿ ಬಿಜೆಪಿಯತ್ತ ವಾಲಿದ್ದಾರೆ ಎಂದರು.
ಪಕ್ಷ ಸಂಘಟನೆಗಾಗಿ ಅ.೧ರ ನಂತರ ತಾವು ಸೇರಿ ದಂತೆ ಪಕ್ಷದ ನಾಯಕರು ಇಡೀ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಪಕ್ಷದ ಕಾರ್ಯ ಕರ್ತರು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿರು ವುದು ಸಂತಸ ತಂದಿದೆ. ಇದು ಪಕ್ಷದ ಚುನಾವಣೆಯ ಯಶಸ್ಸಿಗೆ ನಿರ್ಣಾಯಕವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅವಧಿಗೂ ಮೊದಲೇ ಚುನಾವಣೆ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಂತಹ ಯಾವುದೇ ಉದ್ದೇಶ ಇದ್ದಂತಿಲ್ಲ, ಅಮಿತ್ ಶಾ ರಾಜ್ಯಕ್ಕೆ ಬಂದಾಗ ಲೆಲ್ಲಾ ಇಂತಹ ಊಹಾಪೋಹಗಳು ಉದ್ಭವಿಸುತ್ತವೆ. ಅವರು ಬಂದು ಹೋದ ಬಳಿಕ ಅಂತಹ ಸುದ್ದಿಗಳಿ ದ್ದರೆ ನಾನೇ ತಿಳಿಸುವೆ ಎಂದರು.

ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಯಶಸ್ಸಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಕಾರ್ಯತಂತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ಸಮುದಾಯವನ್ನು ನಮ್ಮ ಜೊತೆಗೆ ಕೊಂಡೊಯ್ಯುವ ಕೆಲಸ ಆಗಬೇಕಾಗಿದೆ. ಆ ಸಮುದಾಯಗಳು ಈಗಾಗಲೇ ಬಿಜೆಪಿಯೊಂದಿಗೇ ಇದ್ದು, ಅವರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೊಂಡೊಯ್ಯುವ ಪ್ರಯತ್ನ ಮಾಡಲಿದ್ದೇವೆ. ಅದಕ್ಕಾಗಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದರು.

ಮಹಿಳಾ ಸಬಲೀಕರಣವು ಚುನಾವಣೆಯ ಯಶ ಸ್ಸಿಗೆ ನಿರ್ಣಾಯಕವಾಗಿದೆ. ಅದರಲ್ಲಿ ಶೇ.೧೦೦ರಷ್ಟು ಯಶಸ್ವಿಯಾಗುವ ಕೆಲಸವನ್ನು ಪಕ್ಷವು ಮಾಡುತ್ತದೆ. ‘ನಾರಿ ಶಕ್ತಿ’ ಒಂದು ನಿರ್ಣಾಯಕ ಅಂಶವಾಗಿದೆ. ಬಿಜೆಪಿ ಸರ್ಕಾರವು ಈ ಹಿಂದೆ ಯಾವುದೇ ಸರ್ಕಾರ ಕ್ಕಿಂತ ಮಹಿಳೆಯರ ಸಬಲೀಕರಣಕ್ಕಾಗಿ ಹೆಚ್ಚಿನದನ್ನು ಮಾಡಿದೆ ಎಂದರು. ಮಾಜಿ ಸಚಿವ ಸಿ.ಎಚ್.ವಿಜಯ ಶಂಕರ್, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ಕುಮಾರ್‌ಗೌಡ, ಮೃಗಾ ಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಎಂಎಲ್‌ಸಿಗಳಾದ ತೋಂಟ ದಾರ್ಯ, ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಮೇಯರ್ ಸುನಂದಾ ಪಾಲನೇತ್ರ, ಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್, ಮಾ.ವಿ.ರಾಮಪ್ರಸಾದ್, ಲಕ್ಷಿö್ಮÃ ಕಿರಣ್ ಮಾದೇ ಗೌಡ, ದೇವರಾಜ ಅರಸು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಘು ಕೌಟಿಲ್ಯ, ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇAದ್ರ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಜಿ.ಗಿರಿಧರ್, ಸೋಮಸುಂದರ್, ವಾಣ Ãಶ್‌ಕುಮಾರ್, ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶAಕರ್ ಇತರರು ಈ ವೇಳೆ ಉಪಸ್ಥಿತರಿದ್ದರು.

 

Translate »